ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಗ್ಲಿಷ್‌‌ ಜೊತೆಗೆ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನ ಮಾಡಲು ಆಗ್ರಹ

ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಹಿಂದಿ ದಿವಸ ವಿರೋಧಿ ಅಭಿಯಾನ ನಡೆಸಲಾಯಿತು. ಅಭಿಯಾನಕ್ಕೆ ಬೆಂಬಲಿಸುವಂತೆ ವಕೀಲರಿಗೆ ಕರಪತ್ರಗಳನ್ನು ಹಂಚುವ ಮೂಲಕ ಮನವಿ ಮಾಡಲಾಯಿತು.
ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಗ್ಲಿಷ್‌‌ ಜೊತೆಗೆ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನ ಮಾಡಲು ಆಗ್ರಹ

ಸಂವಿಧಾನದ 348ನೇ ವಿಧಿಗೆ ತಿದ್ದುಪಡಿ ಮಾಡಿ, ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಗ್ಲಿಷ್‌‌ ಜೊತೆಗೆ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನ ಮಾಡಬೇಕು ಎಂದು ವಕೀಲರು ಹಾಗೂ ಕನ್ನಡ ಗೆಳೆಯರ ಬಳಗದ ಪದಾಧಿಕಾರಿಗಳು ಬುಧವಾರ ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಆಗ್ರಹಿಸಿದ್ದಾರೆ.

ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಹಿಂದಿ ದಿವಸ ವಿರೋಧಿ ಅಭಿಯಾನ ನಡೆಯಿತು. ಅಭಿಯಾನಕ್ಕೆ ಬೆಂಬಲಿಸುವಂತೆ ವಕೀಲರಿಗೆ ಕರಪತ್ರಗಳನ್ನು ಹಂಚುವ ಮೂಲಕ ಮನವಿ ಮಾಡಲಾಯಿತು.

ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಸುಲಭವಾಗಿ ಅರ್ಥವಾಗುವಂತೆ, ಸುಲಲಿತವಾಗಿ ಮತ್ತು ನಿರರ್ಗಳವಾಗಿ ಕನ್ನಡ ಭಾಷೆಯಲ್ಲಿ ವಾದಮಂಡನೆ  ಸಾಧ್ಯವಾಗುವವರೆಗೆ ಅಭಿಯಾನಕ್ಕೆ ಬೆಂಬಲ ಸೂಚಿಸಬೇಕು ಎಂದು ಈ ವೇಳೆ ಮನವಿ ಮಾಡಲಾಯಿತು.

ಅಭಿಯಾನದಲ್ಲಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್‌, ವಕೀಲರಾದ ಸೂರ್ಯ ಮುಕುಂದರಾಜ್ ಮತ್ತಿತರರು ಭಾಗವಹಿಸಿದ್ದರು.

Related Stories

No stories found.
Kannada Bar & Bench
kannada.barandbench.com