![[ಚುಟುಕು] ನಟ ದಿಲೀಪ್ ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆಗೆ ಇನ್ನೂ ಹತ್ತು ದಿನಗಳ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್](http://media.assettype.com/barandbench-kannada%2F2022-01%2F5b176bd4-1329-4f3b-8213-538b40e5bb8c%2Fbarandbench_2022_01_7ff87e0d_0313_4672_8d15_cd2f05e48397_WhatsApp_Image_2022_01_25_at_1_14_32_PM__1_.jpeg?w=480&auto=format%2Ccompress&fit=max)
ಬಹುಭಾಷಾ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸಾಕ್ಷಿಗಳ ವಿಚಾರಣೆ ನಡೆಸಲು ಕೇರಳ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ 10 ದಿನಗಳ ಕಾಲಾವಕಾಶ ನೀಡಿದೆ. ಜನವರಿ 17 ರಂದು ಐವರು ಹೊಸ ಸಾಕ್ಷಿಗಳ ವಿಚಾರಣೆ ನಡೆಸಲು ಪ್ರಾಸಿಕ್ಯೂಷನ್‌ಗೆ ಸಮ್ಮತಿಸಿದ ನ್ಯಾಯಾಲಯ10 ದಿನಗಳ ಅವಧಿಯಲ್ಲಿ ಅವರ ವಿಚಾರಣೆಯನ್ನು ಪೂರ್ಣಗೊಳಿಸಲು ಸೂಚಿಸಿತ್ತು. ಅವರಲ್ಲಿ ಮೂವರ ವಿಚಾರಣೆ ಪೂರ್ಣಗೊಳಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಮಹಾ ನಿರ್ದೇಶಕ ನ್ಯಾಯಾಲಯಕ್ಕೆ ತಿಳಿಸಿದ್ದು ಇನ್ನು ಇಬ್ಬರ ವಿಚಾರಣೆಗೆ 10 ದಿನಗಳ ಕಾಲಾವಕಾಶ ಅಗತ್ಯವಿದೆ ಎಂದರು. ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.