ಕೆಎಸ್‌ಎಲ್‌ಎಸ್‌ಎ ಶಾಖಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಉಳಿಕೆ ಮೂಲ ವೃಂದದ ಹದಿನೇಳು ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಎರಡು ಹುದ್ದೆಗಳನ್ನು ನೇರ ನೇಮಕಾತಿಗೆ ಅಧಿಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ.
KSLSA
KSLSA
Published on

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅದರ ವ್ಯಾಪ್ತಿಯಲ್ಲಿರುವ ಕಚೇರಿಗಳಲ್ಲಿ ಖಾಲಿ ಇರುವ ಶಾಖಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉಳಿಕೆ ಮೂಲ ವೃಂದದ ಹದಿನೇಳು ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಎರಡು ಹುದ್ದೆಗಳನ್ನು ನೇರ ನೇಮಕಾತಿಗೆ ಅಧಿಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವರ್ಗೀಕರಣ, ವೇತನ ಶ್ರೇಣಿ, ನೇಮಕಾತಿ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ, ವಯೋಮಿತಿ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಈ ಅಧಿಕೃತ ವೆಬ್‍ಸೈಟ್‍ಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ https://cetonline.karnataka.gov.in/kea/indexnew  ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ https://karnataka.nalsa.gov.in ಗೆ ಭೇಟಿ ನೀಡಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kannada Bar & Bench
kannada.barandbench.com