ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈಗೆ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಆರೋಪಿ ರೈ ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತದ ಎರಡು ಭದ್ರತಾ ಖಾತರಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.
Karnataka Lokayukta
Karnataka Lokayukta

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆ ಆರ್‌ ಪುರಂ ತಹಶೀಲ್ದಾರ್‌ ಎಸ್‌ ಅಜಿತ್‌ಕುಮಾರ್‌ ರೈ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿದೆ.

ಭ್ರಷ್ಟಾಚಾರ ಆರೋಪದಲ್ಲಿ ಅಮಾನತುಗೊಂಡಿರುವ ಅಜಿತ್‌ ಕುಮಾರ್‌ ರೈ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆಗಸ್ಟ್‌ 8ರಂದು ಕಾಯ್ದಿರಿಸಿದ್ದ ಆದೇಶವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ಇಂದು ಪ್ರಕಟಿಸಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Also Read
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ ಜುಲೈ 6ವರೆಗೆ ಪೊಲೀಸ್‌ ಕಸ್ಟಡಿಗೆ

ಆರೋಪಿ ರೈ ಐದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತದ ಎರಡು ಭದ್ರತಾ ಖಾತರಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಈ ಹಿಂದೆ ವಿಶೇಷ ನ್ಯಾಯಾಲಯವು ರೈ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಆನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿತ್ತು.

Related Stories

No stories found.
Kannada Bar & Bench
kannada.barandbench.com