ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್

ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಮಾರ್ಚ್‌ 24ಕ್ಕೆ ಮುಂದೂಡಿದ ಪೀಠವು ಅಲ್ಲಿಯವರಗೆ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿತು.
D K Shivakumar, CBI and Karnataka HC
D K Shivakumar, CBI and Karnataka HC
Published on

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್‌ 24ರವರೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ಸಿಬಿಐ ತನಿಖೆ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಇದಕ್ಕೂ ಮುನ್ನ ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ ಪ್ರಸನ್ನಕುಮಾರ್ ಅವರು ಅರ್ಜಿದಾರರ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವು ಕೋರಿ ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಗಣಿಸಬೇಕು ಎಂದು ಕೋರಿದರು.

ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಮಾರ್ಚ್‌ 24ಕ್ಕೆ ಮುಂದೂಡಿದ ಪೀಠವು ಅಲ್ಲಿಯವರಗೆ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿತು.

Also Read
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್‌ ವಿರುದ್ದದ ತನಿಖೆ; ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್‌

ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್‌ 3ರಂದು ಡಿ ಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆಬ್ರವರಿ 10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

Kannada Bar & Bench
kannada.barandbench.com