ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಆಗಿ ಬಿ ಮುರಳೀಧರ್‌ ಪೈ ನೇಮಕ

ರಿಜಿಸ್ಟ್ರಾರ್‌ ಜನರಲ್‌ ಆಗಿದ್ದ ಟಿ ಜಿ ಶಿವಶಂಕರೇಗೌಡ ಅವರು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದರಿಂದ ಆ ಹುದ್ದೆಯು ಖಾಲಿಯಾಗಿತ್ತು.
ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಆಗಿ ಬಿ ಮುರಳೀಧರ್‌ ಪೈ ನೇಮಕ

ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆಗಿ ಜಿಲ್ಲಾ ನ್ಯಾಯಾಧೀಶರಾದ ಬಿ ಮುರಳೀಧರ್‌ ಪೈ ಅವರನ್ನು ನೇಮಿಸಲಾಗಿದೆ. ಅವರು ಹಾಲಿ ಈ ಹುದ್ದೆಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರ ನಿರ್ದೇಶನದಂತೆ ವಿಚಕ್ಷಣಾ ವಿಭಾಗದ ರಿಜಿಸ್ಟ್ರಾರ್‌ ಕೆ ಎಸ್‌ ಭರತ್‌ ಕುಮಾರ್‌ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ರಿಜಿಸ್ಟ್ರಾರ್‌ ಜನರಲ್‌ ಆಗಿದ್ದ ಟಿ ಜಿ ಶಿವಶಂಕರೇಗೌಡ ಅವರು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದರಿಂದ ಆ ಹುದ್ದೆಯು ಖಾಲಿಯಾಗಿತ್ತು.

Also Read
ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ನ್ಯಾಯಾಧೀಶರಾದ ಜೈಶಂಕರ್‌ ನೇಮಕ

ನ್ಯಾಯಿಕ ರಿಜಿಸ್ಟ್ರಾರ್‌ ಜನರಲ್‌ ಆಗಿದ್ದ ಜೈಶಂಕರ್‌ ಅವರನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಸದರಿ ಹುದ್ದೆಯು ಖಾಲಿಯಾಗಿದೆ. ಇದರ ಪ್ರಭಾರಿಯಾಗಿ ಭರತ್‌ಕುಮಾರ್‌ ನೇಮಕವಾಗಿದ್ದಾರೆ.

Related Stories

No stories found.
Kannada Bar & Bench
kannada.barandbench.com