ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ನ್ಯಾಯಾಧೀಶರಾದ ಜೈಶಂಕರ್‌ ನೇಮಕ

ಜೈಶಂಕರ್‌ ಅವರು 2003ರಲ್ಲಿ ಸಿವಿಲ್‌ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆ ಆರಂಭಿಸಿದ್ದು, ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ (ನ್ಯಾಯಾಂಗ) ಆಗಿಯೂ ಜೈಶಂಕರ್‌ ಜವಾಬ್ದಾರಿ ನಿಭಾಯಿಸಿದ್ದರು.
Jaishankar, Member Secretary, KSLSA
Jaishankar, Member Secretary, KSLSA

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ನೂತನ ಸದಸ್ಯ ಕಾರ್ಯದರ್ಶಿಯನ್ನಾಗಿ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ (ನ್ಯಾಯಾಂಗ) ಆಗಿದ್ದ ಜಿಲ್ಲಾ ನ್ಯಾಯಾಧೀಶರಾದ ಜೈಶಂಕರ್‌ ಅವರನ್ನು ಈಚೆಗೆ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅವರ ಜೊತೆ ಸಮಾಲೋಚನೆ ನಡೆಸಿ, ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ 1987ರ ಸೆಕ್ಷನ್‌ 6(3)ರ ಅಡಿ ನೇಮಕ ಮಾಡಿ ಕಾನೂನು ಇಲಾಖೆಯ (ಆಡಳಿತ) ಸರ್ಕಾರದ ಅಧೀನ ಕಾರ್ಯದರ್ಶಿ ಆದಿನಾರಾಯಣ ಆದೇಶ ಹೊರಡಿಸಿದ್ದಾರೆ. ಜೈಶಂಕರ್‌ ಅವರು 2003ರಲ್ಲಿ ಸಿವಿಲ್‌ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆ ಆರಂಭಿಸಿದ್ದು, ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

Also Read
ಸುಪ್ರೀಂ ಕೋರ್ಟ್‌ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ನ್ಯಾ. ಶಶಿಧರ ಶೆಟ್ಟಿ ನೇಮಕ

ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿಯಾಗಿದ್ದ ಎಚ್‌ ಶಶಿಧರ ಶೆಟ್ಟಿ ಅವರನ್ನು ಈಚೆಗೆ ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಹೀಗಾಗಿ, ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು. ಈ ಹುದ್ದೆಗೆ ಜೈಶಂಕರ್‌ ಅವರನ್ನು ನೇಮಕ ಮಾಡಲಾಗಿದೆ.

Kannada Bar & Bench
kannada.barandbench.com