ಕ್ಷುಲ್ಲಕ ಕಾರಣಕ್ಕಾಗಿ ರಾಮ ಮಂದಿರ ಉದ್ಘಾಟನೆ ನೇರ ಪ್ರಸಾರಕ್ಕೆ ತಡೆ ನೀಡದಿರಿ: ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಸೂಚನೆ

ಆದರೆ, ಅರ್ಜಿದಾರರು ಹೇಳಿರುವಂತೆ ಆ ರೀತಿಯ ಯಾವುದೇ ಕಾರ್ಯಕ್ರಮಕ್ಕೆ ನಿಷೇಧ ವಿಧಿಸಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು.
ರಾಮ ಮಂದಿರ ಮತ್ತು ತಮಿಳುನಾಡು ನಕ್ಷೆ
ರಾಮ ಮಂದಿರ ಮತ್ತು ತಮಿಳುನಾಡು ನಕ್ಷೆ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಅಥವಾ ಸಂಬಂಧಿತ ಕಾರ್ಯಕ್ರಮಗಳ ನೇರ ಪ್ರಸಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಅನಗತ್ಯ ನಿಷೇಧ ವಿಧಿಸದಂತೆ ಸುಪ್ರೀಂ ಕೋರ್ಟ್ ಸೋಮವಾರ ತಮಿಳುನಾಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ [ವಿನೋಜ್‌ ಮತ್ತು ಭಾರತ ಒಕ್ಕೂಟ ಇನ್ನಿತರರ ನಡುವಣ ಪ್ರಕರಣ].

ಕೆಲವು ಪ್ರದೇಶಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಕಾರ್ಯಕ್ರಮ ಪ್ರಸಾರದ ಅನುಮತಿ ತಿರಸ್ಕರಿಸುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ತಿಳಿಸಿತು.

"ಕೆಲವು ಸ್ಥಳಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರು ಎಂದು ಅನುಮತಿ ನಿರಾಕರಿಸುವುದಾದರೆ ಆ ಕಾರಣಗಳು ಅಮಾನವೀಯವಾದವು" ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತು.

ʼಇಂತಹ ಕಾರಣಗಳಿಗಾಗಿ ನೇರ ಪ್ರಸಾರವನ್ನು ತಿರಸ್ಕರಿಸಿಲ್ಲ ಎಂಬುದನ್ನು ನೋಡಿಕೊಳ್ಳಿ. ನಾವು ಮಾಹಿತಿ ಸಂಗ್ರಹಿಸಲು ನಿರ್ದೇಶಿಸಿದ್ದೇವೆ. ಎಷ್ಟು ಅನುಮತಿ ನೀಡಲಾಗಿದೆ ಎಷ್ಟು ನಿರಾಕರಿಸಲಾಗಿದೆ ಎಂಬುದು ನಮಗೆ ತಿಳಿಯುತ್ತದೆʼ ಎಂದು ನ್ಯಾ. ಖನ್ನಾ ತಮಿಳುನಾಡು ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ ಹೇಳಿದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು  ದೀಪಂಕರ್ ದತ್ತಾ. ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಚಿತ್ರ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ. ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಚಿತ್ರ.

ಆದರೆ, ಅರ್ಜಿದಾರರು ಹೇಳಿರುವಂತೆ ಆ ರೀತಿಯ ಯಾವುದೇ ಕಾರ್ಯಕ್ರಮಕ್ಕೆ ನಿಷೇಧ ವಿಧಿಸಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು.

ಅಯೋಧ್ಯೆಯ ರಾಮ್ ಲಲ್ಲಾ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ನೇರ ಪ್ರಸಾರ ನಿಷೇಧಿಸಲು ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ರೀತಿಯ ನಿಷೇಧ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಆರೋಪಿಸಿ ಅರ್ಜಿದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ದಾಮಾ ಶೇಷಾದ್ರಿ ನಾಯ್ಡು, ತಮಿಳುನಾಡು ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

Related Stories

No stories found.
Kannada Bar & Bench
kannada.barandbench.com