ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹಂಗಾಮಿ ಅಧ್ಯಕ್ಷರಾಗಿ ಡಾ. ಶ್ಯಾಮ್‌ ಭಟ್‌ ನೇಮಕ

ನೂತನ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಭಟ್‌ ಅಧ್ಯಕ್ಷ ಹುದ್ದೆಯಲ್ಲಿರಲಿದ್ದಾರೆ ಎಂದು ಕಾನೂನು ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.
ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹಂಗಾಮಿ ಅಧ್ಯಕ್ಷರಾಗಿ ಡಾ. ಶ್ಯಾಮ್‌ ಭಟ್‌ ನೇಮಕ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್‌ಎಚ್‌ಆರ್‌ಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್‌ ಅಧಿಕಾರಿ ಡಾ. ಟಿ ಶ್ಯಾಮ್ ಭಟ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮಾನವ ಹಕ್ಕುಗಳ ರಕ್ಷಣಾ ಕಾಯಿದೆ ಸೆಕ್ಷನ್‌ 25ರ ಉಪ ಸೆಕ್ಷನ್‌ (1)ರ ಅಡಿ ರಾಜ್ಯಪಾಲರು ಡಾ. ಟಿ ಶ್ಯಾಮ್‌ ಭಟ್‌ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನೂತನ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಭಟ್‌ ಅಧ್ಯಕ್ಷ ಹುದ್ದೆಯಲ್ಲಿರಲಿದ್ದಾರೆ ಎಂದು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಎಸ್‌ ಸಂಗ್ರೇಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಎಸ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿ ಅವರನ್ನು ಲೋಕಪಾಲದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಹುದ್ದೆ ತೊರೆದಿದ್ದರು. ಇದರಿಂದ ಎಸ್‌ಎಚ್‌ಆರ್‌ಸಿ ಅಧ್ಯಕ್ಷ ಹುದ್ದೆ ಖಾಲಿಯಿತ್ತು. ಇದಕ್ಕೆ ಈಗ ಶ್ಯಾಮ್‌ ಭಟ್‌ ನೇಮಕ ಮಾಡಲಾಗಿದೆ.

Related Stories

No stories found.
Kannada Bar & Bench
kannada.barandbench.com