ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಇ ಡಿ ಆರೋಪಪಟ್ಟಿ

ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿಗೂ ಹೆಚ್ಚಿನ ಆಸ್ತಿ ದುರುಪಯೋಗ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು.
Rahul Gandhi, Sonia Gandhi and ED
Rahul Gandhi, Sonia Gandhi and ED
Published on

ಕಾಂಗ್ರೆಸ್ ಮಾಲೀಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ನ ಸ್ಯಾಮ್ ಪಿತ್ರೋಡಾ ಹಾಗೂ ಹಲವರ ಹೆಸರನ್ನು ದೂರಿನಲ್ಲಿ ಹೆಸರಿಸಲಾಗಿದೆ.

Also Read
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೋನಿಯಾ, ರಾಹುಲ್ ಗಾಂಧಿಗೆ ಇ ಡಿ ಸಮನ್ಸ್

ಪ್ರಕರಣವನ್ನು ಪರಿಗಣಿಸಿದ ರೌಸ್ ಅವೆನ್ಯೂ ನ್ಯಾಯಾಲಯದ‌ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ಏಪ್ರಿಲ್ 25 ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದರು.

Also Read
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ಪ್ರತಿಕ್ರಿಯೆಗೆ ಸೂಚಿಸಿದ ದೆಹಲಿ ಹೈಕೋರ್ಟ್

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ಗೆ (ಎಜೆಎಲ್‌) ಕಾಂಗ್ರೆಸ್‌ ಪಕ್ಷ ₹ 90 ಕೋಟಿಯಷ್ಟು ಸಾಲ ನೀಡಿತ್ತು. ಯಂಗ್‌ ಇಂಡಿಯಾ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ ₹ 50 ಲಕ್ಷ ಹಣ ನೀಡಿ ಎಜೆಎಲ್‌ ಕಾಂಗ್ರೆಸ್‌ಗೆ ನೀಡಬೇಕಿದ್ದ ₹ 90 ಕೋಟಿಯಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು ಎಂಬುದು ಹಗರಣದ ಸಾರ. ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿಗೂ ಅಧಿಕ ಆಸ್ತಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.

 ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ - ಯಂಗ್ ಇಂಡಿಯನ್ ಲಿಮಿಟೆಡ್‌ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡಿದ್ದರು.

Kannada Bar & Bench
kannada.barandbench.com