ಚುನಾವಣಾ ಅಕ್ರಮ ಪ್ರಕರಣ: ಶಾಸಕ ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಹೈಕೋರ್ಟ್‌

ಪರಾಜಿತ ಅಭ್ಯರ್ಥಿ ಜಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
H D Revanna and Karnataka HC
H D Revanna and Karnataka HC

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್‌ ಡಿ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

ಪರಾಜಿತ ಅಭ್ಯರ್ಥಿ ಜಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು ಅರ್ಜಿ ಸಂಬಂಧ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಹೈಕೋರ್ಟ್‌ ಸಮನ್ಸ್ ಜಾರಿ ಮಾಡಿದೆ. ಆದರೆ, ಈವರೆಗೂ ಅವರಿಗೆ ಸಮನ್ಸ್‌ ಜಾರಿಯಾಗಿಲ್ಲ. ಆದ್ದರಿಂದ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿ ಮಾಡಲು ಆದೇಶಿಸಬೇಕು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ಪೀಠವು ಎಚ್‌ ಡಿ ರೇವಣ್ಣ ಸೇರಿದಂತೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಮತ್ತೆ ಸಮನ್ಸ್‌ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಮುಂದೂಡಿತು.

Also Read
ಚುನಾವಣಾ ಅಕ್ರಮ ಪ್ರಕರಣ: ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ, ಶ್ರೇಯಸ್‌ ಪಟೇಲ್‌ಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಚುನಾವಣೆ ಸಂದರ್ಭದಲ್ಲಿ ಎಚ್‌ ಡಿ ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ ಎರಡು ಕೋಳಿ ಮತ್ತು ಎರಡು ಸಾವಿರ ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ದುಡ್ಡು, ಕೋಳಿಯ ಆಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. 30 ಮಂದಿ ವಿರುದ್ಧ ದೂರು ಪ್ರಕರಣ ದಾಖಲಿಸಲಾಗಿದೆ. ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರಗಳ ಬಗ್ಗೆ ರೇವಣ್ಣ ಸಂಪೂರ್ಣ ಮಾಹಿತಿ ನೀಡಿಲ್ಲ. ಅವರ ಪತ್ನಿ ಭವಾನಿ ಅವರ ಆಸ್ತಿಯ ವಿವರಗಳೂ ಸುಳ್ಳಿನಿಂದ ಕೂಡಿವೆ. ರೇವಣ್ಣ ಭಾರಿ ಅಕ್ರಮ ಎಸಗಿ ಜಯಗಳಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿ ಸಂಬಂಧ ರೇವಣ್ಣಗೆ ಹೈಕೋರ್ಟ್‌ ಈ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

Related Stories

No stories found.
Kannada Bar & Bench
kannada.barandbench.com