ಚುನಾವಣಾ ಅಕ್ರಮ ಪ್ರಕರಣ: ಹಾಸನ ಸಂಸದ ಶ್ರೇಯಸ್‌ ಪಟೇಲ್‌ಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಶ್ರೇಯಸ್‌ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. 5 ವರ್ಷಗಳ ಆದಾಯ ತೆರಿಗೆ ಮಾಹಿತಿ ಸಲ್ಲಿಸಿಲ್ಲ. ಚುನಾವಣಾ ವೆಚ್ಚದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆಕ್ಷೇಪಿಸಲಾಗಿದೆ.
Shreyas Patel and Karnataka High Court
Shreyas Patel and Karnataka High Court
Published on

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ವಕೀಲ ಜಿ ದೇವರಾಜೇಗೌಡ ಪುತ್ರ ಡಿ ಚರಣ್‌ ಗೌಡ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಶ್ರೇಯಸ್‌ ಪಟೇಲ್‌ಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

ಚರಣ್‌ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಸಂಸದ ಶ್ರೇಯಸ್‌ ಪಟೇಲ್‌ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತು.

Also Read
ಸಂಸದರಾದ ಪ್ರಭಾ ಮಲ್ಲಿಕಾರ್ಜುನ್‌, ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಶ್ರೇಯಸ್‌ ಪಟೇಲ್‌ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. ಐದು ವರ್ಷಗಳ ಆದಾಯ ತೆರಿಗೆ ಪಾವತಿ ಸಲ್ಲಿಸಿಲ್ಲ. ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ಶ್ರೇಯಸ್‌ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ಖರ್ಚು ಮಾಡಿದ್ದಾರೆ. ಆ ಕುರಿತು ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. 

Kannada Bar & Bench
kannada.barandbench.com