[ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ] ಚುನಾವಣಾಧಿಕಾರಿ ನೇಮಕ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಕಾಲಾವಕಾಶ ಬೇಕೆಂದು ಅಪೆಕ್ಸ್ ಬ್ಯಾಂಕ್ ಪರ ವಕೀಲರು ಮನವಿ ಮಾಡಿದರು. ಇದರಿಂದ ವಿಚಾರಣೆ ಮುಂದೂಡಿದ ಹೈಕೋರ್ಟ್.‌
Karnataka High Court
Karnataka High Court
Published on

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರವು ಚುನಾವಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಹೇಳಿದೆ.

ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಬ್ಯಾಂಕಿನ ನಿರ್ದೇಶಕರೂ ಆಗಿರುವ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠದ ವಿಚಾರಣೆ ನಡೆಸಿತು.

Justice M I Arun
Justice M I Arun

ಈ ವೇಳೆ ಸರ್ಕಾರದ ಪರ ವಕೀಲರು, ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರ ಚುನಾವಣಾಧಿಕಾರಿಯನ್ನು ನೇಮಿಸಿದೆ ಎಂದರು.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಕಾಲಾವಕಾಶ ಬೇಕೆಂದು ಅಪೆಕ್ಸ್ ಬ್ಯಾಂಕ್ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಪೀಠ ವಿಚಾರಣೆಯನ್ನು ಸೆಪ್ಟೆಂಬರ್‌ 8ಕ್ಕೆ ಮುಂದೂಡಿತು.

Kannada Bar & Bench
kannada.barandbench.com