ಪಿಎಂ ಕೇರ್ಸ್ ನಿಧಿಗೆ ವಿನಾಯಿತಿ: ಆರ್‌ಟಿಐ ಮಾಹಿತಿ ನೀಡಲು ನಿರ್ದೇಶಿಸಿದ್ದ ಸಿಐಸಿ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ

ಪಿಎಂ ಕೇರ್ಸ್ ನಿಧಿ ಮೂರನೇ ಪಕ್ಷಕಾರರದ್ದಾಗಿದ್ದು, ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಆರ್‌ಟಿಐ ಕಾಯಿದೆಯಡಿ ನೀಡಲು ಸಾಧ್ಯವಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಹೈಕೋರ್ಟ್ ಮೊರೆ ಹೋಗಿತ್ತು.
PM Cares Fund with Delhi HC
PM Cares Fund with Delhi HC

ಆದಾಯ ತೆರಿಗೆ ಕಾಯಿದೆಯಡಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸುವಾಗ ಪಿಎಂ ಕೇರ್ಸ್ ನಿಧಿ ಸಲ್ಲಿಸಿದ್ದ ದಾಖಲೆಗಳ ಮಾಹಿತಿ ಮತ್ತು ಪ್ರತಿಗಳನ್ನು ಒದಗಿಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶಕ್ಕೆ ದೆಹಲಿ ಹೈಕೋರ್ಟ್ ಗುರುವಾರ ತಡೆ ನೀಡಿದೆ.

ಅಲ್ಲದೆ ಆದಾಯ ತೆರಿಗೆ ಇಲಾಖೆಯ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ)/ಆದಾಯ ತೆರಿಗೆ ಉಪ ಆಯುಕ್ತರು (ಮುಖ್ಯ ಕಚೇರಿ) (ವಿನಾಯಿತಿ) ಅವರ ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ನೋಟಿಸ್ ನೀಡಿದ್ದಾರೆ.

Also Read
ಪಿಎಂ ಕೇರ್ಸ್‌ ನಿಧಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಆಲಿಸಲು ನಿರಾಕರಿಸಿದ ಸುಪ್ರೀಂ; ಹೈಕೋರ್ಟ್‌ಗೆ ಎಡತಾಕಲು ಸೂಚನೆ

ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80 ಜಿ ಅಡಿಯಲ್ಲಿ ಪಿಎಂ ಕೇರ್ಸ್ ನಿಧಿಗೆ ಅನುಮೋದನೆ ನೀಡಲಾಗಿದೆ. ಇದು ತೆರಿಗೆದಾರರಿಗೆ ದೇಣಿಗೆಯಾಗಿ ನೀಡಿದ ವಿವಿಧ ಕೊಡುಗೆಗಳಿಂದ ತೆರಿಗೆ ಕಡಿತಗಳನ್ನು ಪಡೆಯಲು ಅನುಮತಿಸುತ್ತದೆ.

ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಿತ್ತಲ್ ಅವರು ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿಯಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಿಐಸಿ ನೀಡಿದ ಆದೇಶವನ್ನು ಆದಾಯ ತೆರಿಗೆ ಇಲಾಖೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

Related Stories

No stories found.
Kannada Bar & Bench
kannada.barandbench.com