ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲಿ ನಾಲ್ವರು ಮಹಿಳಾ ನ್ಯಾಯಮೂರ್ತಿಗಳ ಕಾರ್ಯನಿರ್ವಹಣೆ

ಈ ಹಿಂದೆ ಮೂವರು ಮಹಿಳಾ ನ್ಯಾಯಮೂರ್ತಿಗಳು ಒಟ್ಟಿಗೆ ಸುಮಾರು ಎರಡು ವರ್ಷಗಳ ಕಾಲ ಸರ್ವೋಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಣೆ ಮಾಡಿದ್ದು ದಾಖಲೆಯಾಗಿತ್ತು.
ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲಿ ನಾಲ್ವರು ಮಹಿಳಾ ನ್ಯಾಯಮೂರ್ತಿಗಳ ಕಾರ್ಯನಿರ್ವಹಣೆ
Justices Indira Banerjee, Hima Kohli, BV Nagarathna and Bela Trivedi

ಸುಪ್ರೀಂ ಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ಒಂಬತ್ತು ಮಂದಿ ನ್ಯಾಯವೇತ್ತರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಬೆನ್ನಿಗೇ ಇದೇ ಮೊದಲ ಬಾರಿಗೆ ಸರ್ವೋಚ್ಚ ನ್ಯಾಯಾಲಯವು ತನ್ನ ಏಳು ದಶಕಗಳ ಇತಿಹಾಸದಲ್ಲಿ ನಾಲ್ವರು ಮಹಿಳಾ ನ್ಯಾಯಮೂರ್ತಿಗಳು ಒಟ್ಟಿಗೆ ಕಾರ್ಯನಿರ್ವಹಿಸುವುದನ್ನು ಕಾಣಲಿದೆ.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹಿಮಾ ಕೋಹ್ಲಿ, ಬಿ ವಿ ನಾಗರತ್ನ ಮತ್ತು ಬೆಲಾ ತ್ರಿವೇದಿ ಇಂತಹ ಒಂದು ನೂತನ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇವರಲ್ಲಿ ಮೂವರು ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದವರು. ನ್ಯಾ. ಇಂದಿರಾ ಬ್ಯಾನರ್ಜಿ ಅವರು 2018ರಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Justice R Banumathi, Justice Indu Malhotra and Justice Indira Banerjee
Justice R Banumathi, Justice Indu Malhotra and Justice Indira Banerjee

ಈವರೆಗೆ ಮೂವರು ಮಹಿಳಾ ನ್ಯಾಯಮೂರ್ತಿಗಳು ಒಂದು ನಿರ್ದಿಷ್ಟ ಅವಧಿಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಣೆ ಮಾಡಿದ್ದೇ ದಾಖಲೆಯಾಗಿತ್ತು. ನ್ಯಾಯಮೂರ್ತಿಗಳಾದ ಆರ್‌ ಭಾನುಮತಿ, ಇಂದೂ ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರು ಆಗಸ್ಟ್‌ 2018ರಿಂದ ಜುಲೈ 2020ರ ಅವಧಿಗೆ ಸುಮಾರು ಎರಡು ವರ್ಷಗಳ ಕಾಲ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಒಗ್ಗೂಡಿ ಕಾರ್ಯನಿರ್ವಹಿಸಿದ್ದರು.

ಪ್ರಸಕ್ತ ಕಾರ್ಯನಿರ್ವಹಿಸುವ ನಾಲ್ವರು ಮಹಿಳಾ ನ್ಯಾಯಮೂರ್ತಿಗಳಲ್ಲಿ ನ್ಯಾ. ನಾಗರತ್ನ ಅವರು 2027ಕ್ಕೆ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೇವೆ ಸಲ್ಲಿಸುವ ಅವಕಾಶ ಹೊಂದಿದ್ದಾರೆ. ನ್ಯಾ. ಇಂದಿರಾ ಬ್ಯಾನರ್ಜಿಯವರು ಸೆ.23, 2022ಕ್ಕೆ ನಿವೃತ್ತರಾಗಲಿದ್ದಾರೆ.

Related Stories

No stories found.
Kannada Bar & Bench
kannada.barandbench.com