High Court of Karnataka
High Court of Karnataka

ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಖಾಯಂ ಆಗಿ ನೇಮಕ

ಕೇಂದ್ರ ಕಾನೂನು ಇಲಾಖೆಯು ಖಾಯಮಾತಿ ಕುರಿತು ಸೋಮವಾರ ಅಧಿಸೂಚನೆ ಹೊರಡಿಸಿದೆ.
Published on

ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್‌ ಕೃಷ್ಣಕುಮಾರ್‌, ಅಶೋಕ್‌ ಸುಭಾಷ್‌ಚಂದ್ರ ಕಿಣಗಿ, ಸೂರಜ್‌ ಗೋವಿಂದರಾಜು ಮತ್ತು ಸಚಿನ್‌ ಶಂಕರ್‌ ಮಗದುಮ್‌ ಅವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ. 2019ರ ಸೆಪ್ಟೆಂಬರ್‌ನಲ್ಲಿ ಈ ನಾಲ್ವರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನಿಯುಕ್ತಿ ಮಾಡಲಾಗಿತ್ತು.

Kannada Bar & Bench
kannada.barandbench.com