
ಕರ್ನಾಟಕ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಂಗದ ಎಲ್ಲಾ ಕೋರ್ಟ್‌ಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರ ಅಳವಡಿಸುವಂತೆ ಹೈಕೋರ್ಟ್ ಗುರುವಾರ ಸುತ್ತೋಲೆ ಹೊರಡಿಸಿದೆ.
ಜನ ಸಾಮಾನ್ಯರು, ವಕೀಲರು ಮತ್ತು ವಿವಿಧ ಸಂಘ-ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರವು ಕೋರ್ಟ್ ಹಾಲ್‌ಗಳಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ಕಾಲಕಾಲಕ್ಕೆ ಮನವಿ ಮಾಡಿದ್ದವು. ಈ ಸಂಬಂಧ ಪೂರ್ಣ ನ್ಯಾಯಾಲಯವು ಏಪ್ರಿಲ್ 26ರಂದು ನಿರ್ಧಾರ ಕೈಗೊಂಡಿದೆ.
ಹೀಗಾಗಿ, ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಹಾಗೂ ಜಿಲ್ಲಾ ನ್ಯಾಯಾಲಯಗಳ ಎಲ್ಲಾ ಕೋರ್ಟ್ ಹಾಲ್‌ಗಳಲ್ಲಿ ಸೂಕ್ತ ಸ್ಥಳದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.