ಗೋವಾ ವಿಧಾನಸಭಾ ಚುನಾವಣೆ: ವಕೀಲ ಅಮಿತ್ ಪಾಲೇಕರ್ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ

ಗೋವಾ ರಾಜಧಾನಿ ಪಣಜಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್.
Advocate Amit palekar, AAP

Advocate Amit palekar, AAP


Published on

ಗೋವಾದ ಮುಂದಿನ ವಿಧಾನಸಭೆ ಚುನಾವಣೆಗೆ ವಕೀಲ ಅಮಿತ್ ಪಾಲೇಕರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಹೆಸರಿಸಿದೆ. ಗೋವಾ ರಾಜಧಾನಿ ಪಣಜಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ವಿಷಯ ತಿಳಿಸಿದರು.

ದೆಹಲಿ ಮುಖ್ಯಮಂತ್ರಿ (ಸಿಎಂ) ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬುಧವಾರ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇದೇ ವಿಷಯವನ್ನು ಪ್ರಕಟಿಸಿದರು. ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳಿಂದ ಸ್ಪರ್ಧಿಸಲಿದೆ ಎಂದು ಕೇಜ್ರಿವಾಲ್ ಹೇಳಿದರು.

ಸೇಂಟ್ ಕ್ರೂಜ್ ಕ್ಷೇತ್ರದಿಂದ ಪಾಲೇಕರ್ ಅವರು ಸ್ಪರ್ಧಿಸಲಿದ್ದಾರೆ. ರಾಜ್ಯದ ಶೇ 35ರಷ್ಟಿರುವ ಆದರೆ ಈವರೆಗೆ ತಮ್ಮ ಸಮುದಾಯದ ಏಕೈಕ ಮುಖ್ಯಮಂತ್ರಿಯನ್ನು ಕಂಡಿರುವ ಇತರೆ ಹಿಂದುಳಿದ ವರ್ಗಕ್ಕೆ ಸೇರುವ ಭಂಡಾರಿ ಸಮಾಜವನ್ನು ಅವರು ಪ್ರತಿನಿಧಿಸುತ್ತಾರೆ.

Also Read
ಕೇಜ್ರಿವಾಲ್ ಬಗ್ಗೆ ತಿರುಚಿದ ವೀಡಿಯೊ ಹಂಚಿಕೊಂಡ ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ಸೂಚನೆ

ಗೋವಾದಲ್ಲಿ ಪಕ್ಷದ ಚುನಾವಣಾ ಪ್ರಚಾರದ ಮುಖವಾಗಿ ಜನಾನುರಾಗಿ ಕಾರ್ಯಗಳಿಗೆ ಹೆಸರಾದ ಪ್ರಾಮಾಣಿಕ ವ್ಯಕ್ತಿಯನ್ನು ಪಕ್ಷ ಆಯ್ಕೆ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದರು.

ಸಾಮಾಜಿಕ ಕಾರ್ಯಕರ್ತರೂ ಆಗಿರುವ ಪಾಲೇಕರ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎಎಪಿ ಸೇರಿದ್ದರು. ಬೌದ್ಧಿಕ ಆಸ್ತಿ ಕಾನೂನಿನಲ್ಲಿ ಪರಿಣತಿ ಹೊಂದಿರುವ ಅವರು ವಿಎಂಎಸ್‌ ಕಾನೂನು ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಪಕರಾಗಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ತೀವ್ರವಾಗಿದ್ದಾಗ ಉಂಟಾದ ಆಮ್ಲಜನಕದ ಬಿಕ್ಕಟ್ಟನ್ನು ಎದುರಿಸಲು ಸಹಾಯ ಮಾಡಿದ ಕಾರಣಕ್ಕಾಗಿಯೇ ಪಾಲೇಕರ್ ಅವರನ್ನು ಗುರುತಿಸಲಾಗುತ್ತದೆ.

Kannada Bar & Bench
kannada.barandbench.com