ನೂತನ ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್‌ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಪಾಲರು ಆದೇಶದಲ್ಲಿ ರಾಜ್ಯಪಾಲರು ತಿಳಿಸಿದ್ದಾರೆ.
Rtd Justice B Veerappa and Lokayukta
Rtd Justice B Veerappa and Lokayukta

ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್‌ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Also Read
ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಬಲಪಡಿಸಿದ್ದ ನಿವೃತ್ತ ನ್ಯಾ. ವೀರಪ್ಪ ಉಪಲೋಕಾಯುಕ್ತರಾಗಿ ನೇಮಕ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್‌, ಪರಿಷತ್‌ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

Kannada Bar & Bench
kannada.barandbench.com