Rahul Gandhi and Gujarat HC
Rahul Gandhi and Gujarat HC

ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

ಶಿಕ್ಷೆಗೆ ತಡೆ ನೀಡದೆ ಹೋದರೆ ರಾಹುಲ್ ಅವರಿಗೆ ಅನ್ಯಾಯವೇನೂ ಆಗದು ಎಂದು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರಿದ್ದ ಏಕಸದಸ್ಯ ಪೀಠ ತಿಳಿಸಿತು.

ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಏಕೆ ಇದೆ ಎಂದು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಪ್ಪಿತಸ್ಥರು ಎಂದು ಪ್ರಕಟಿಸಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಗುಜರಾತ್‌ ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಶಿಕ್ಷೆಗೆ ತಡೆ ನೀಡದೆ ಹೋದರೆ  ರಾಹುಲ್‌ ಅವರಿಗೆ ಅನ್ಯಾಯವೇನೂ ಆಗದು ಎಂದು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರಿದ್ದ ಏಕಸದಸ್ಯ ಪೀಠ ತಿಳಿಸಿತು.

Also Read
ಮೋದಿ ಉಪನಾಮ ಹೇಳಿಕೆ: ಶಿಕ್ಷೆಗೆ ತಡೆ ನೀಡಲು ರಾಹುಲ್ ಮಾಡಿದ್ದ ಮನವಿ ತಿರಸ್ಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯ

"ಅವರ ವಿರುದ್ಧ ಕನಿಷ್ಠ 10 ಕ್ರಿಮಿನಲ್ ಮೊಕದ್ದಮೆಗಳು ಬಾಕಿ ಉಳಿದಿವೆ. ಪ್ರಸ್ತುತ ಪ್ರಕರಣದ ಹೊರತಾಗಿಯೂ ಅವರ ವಿರುದ್ಧ ಇನ್ನೂ ಕೆಲವು ಪ್ರಕರಣಗಳು ದಾಖಲಾಗಿವೆ. ಅಂತಹ ಒಂದು ಪ್ರಕರಣವನ್ನು ವೀರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದಾರೆ. ಯಾವುದೇ ರೀತಿಯಲ್ಲೂ, ಶಿಕ್ಷೆ ಅನ್ಯಾಯಕ್ಕೆ ಕಾರಣವಾಗುವುದಿಲ್ಲ. ಶಿಕ್ಷೆಯು ನ್ಯಾಯಯುತವಾಗಿದೆ ಮತ್ತು ಸೂಕ್ತವಾಗಿದೆ. (ಕೆಳ ನ್ಯಾಯಾಲಯದ) ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ, ಆದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ನುಡಿದಿದೆ.

Also Read
ಮೋದಿ ಉಪನಾಮ ಕುರಿತ ಹೇಳಿಕೆ: ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ; ಸದ್ಯಕ್ಕಿಲ್ಲ ಶಿಕ್ಷೆ

2019 ರಲ್ಲಿ ಕರ್ನಾಟಕದ ಕೋಲಾರ ಕ್ಷೇತ್ರದಲ್ಲಿ ಚುನಾವಣಾ ಸಮಾವೇದ ವೇಳೆ ಅವರು "ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಏಕೆ ಇದೆ?” ಎಂದು ಹೇಳಿಕೆ ನೀಡಿದ್ದರು. ಇದನ್ನು ಪೂರ್ಣೇಶ್‌ ಮೋದಿ ಎಂಬ ಬಿಜೆಪಿ ನಾಯಕ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಮೋದಿ ಉಪನಾಮ ಉಳ್ಳವರನ್ನೆಲ್ಲಾ ರಾಹುಲ್‌ ಅವಮಾನಿಸಿದ್ದಾರೆ ಎಂಬುದು ಅವರ ದೂರಿನ ಸಾರವಾಗಿತ್ತು.

ರಾಹುಲ್‌ ತಪ್ಪಿತಸ್ಥರು ಎಂದು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತೀರ್ಪು ನೀಡಿತ್ತು. ಅದರ ಬೆನ್ನಿಗೇ ಕೇರಳದ ವಯನಾಡ್‌ನಿಂದ ಸಂಸದಾರಾಗಿರುವ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಆದೇಶ ಪ್ರಶ್ನಿಸಿ ಅವರು ಸೆಷನ್ಸ್‌ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲಿಯೂ ಸಕಾರಾತ್ಮಕ ತೀರ್ಪು ದೊರೆಯದ ಕಾರಣ ಅವರು ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು

Related Stories

No stories found.
Kannada Bar & Bench
kannada.barandbench.com