ಕಾಶಿ ವಿಶ್ವನಾಥ- ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುವ ಮೂಲಕ 'ಧಾರ್ಮಿಕ ಭಾವನೆಗಳನ್ನು' ಘಾಸಿಗೊಳಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಎಐಎಂಐಎಂ ನೇತಾರ ಅಸಾದುದ್ದೀನ್ ಒವೈಸಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಾರಾಣಸಿ ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಪರಿಗಣಿಸಿದೆ.
ಇಂದು ಅರ್ಜಿ ಸ್ವೀಕರಿಸಿದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಉಜ್ಜವಲ್ ಉಪಾಧ್ಯಾಯ ಅವರು ಪ್ರಕರಣವನ್ನು ನವೆಂಬರ್ 29ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.
ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಈ ಇಬ್ಬರು ನಾಯಕರು ವಾರಣಾಸಿಯ ವಾತಾವರಣ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೂರುದಾರರ ಪರವಾಗಿ ವಕೀಲ ಹರಿಶಂಕರ್ ಪಾಂಡೆ ಮನವಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ, ಈ ನಾಯಕರು ಮತ ಗಳಿಕೆಯ ಉದ್ದೇಶಕ್ಕಾಗಿ ಜನರ ಭಾವನೆಗಳನ್ನು ಕೆರಳಿಸಲು ಯತ್ನಿಸುತ್ತಿದ್ದಾರೆ ಎಂದು ಪಾಂಡೆ ವಾದಿಸಿದ್ದರು.
[ಆದೇಶದ ಪ್ರತಿಯನ್ನು ಇಲ್ಲಿ ಓದಿ]