ಗ್ಯಾನ್‌ವಪಿ ಸಮೀಕ್ಷೆ ಪ್ರಶ್ನಿಸಿ ಅರ್ಜಿ: ವಿಚಾರಣೆ ನಡೆಸಲಿರುವ ನ್ಯಾ. ಚಂದ್ರಚೂಡ್ ನೇತೃತ್ವದ ಸುಪ್ರೀಂ ಪೀಠ [ಚುಟುಕು]

Justice DY Chandrachud
Justice DY Chandrachud

ವಾರಣಾಸಿಯ ಗ್ಯಾನ್‌ವಪಿ ಮಸೀದಿ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ್ದ ಅಲಾಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ನ್ಯಾ. ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.

ನ್ಯಾ. ಚಂದ್ರಚೂಡ್ ನೇತೃತ್ವದ ಪೀಠದೆದುರು ಪ್ರಕರಣ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರು ಶುಕ್ರವಾರ ಸೂಚಿಸಿದರು. ಅಂಜುಮಾನ್‌ ಇಂತೆಜಾಮಿಯಾ ಮಸೀದಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲರಾದ ಹುಜೆಫಾ ಅಹ್ಮದಿ ಶುಕ್ರವಾರ ಕೋರಿದ್ದರು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com