ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್‌ಗೆ ಜಾಮೀನುರಹಿತ ವಾರಂಟ್‌ ಜಾರಿ ಮಾಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಕೆ ಎನ್ ಶಿವಕುಮಾರ್‌ ನಡೆಸಿದರು.
BJP MLA Basanagouda Patil Yatnal
BJP MLA Basanagouda Patil Yatnal
Published on

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಕೆ ಎನ್ ಶಿವಕುಮಾರ್‌ ನಡೆಸಿದರು. ಆದರೆ, ಆರೋಪಿ ಯತ್ನಾಳ್‌ ವಿಚಾರಣೆಗೆ ಹಾಜರಾಗಿರಲಿಲ್ಲ.

Also Read
ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗೆ ಜಾಮೀನು ರಹಿತ ವಾರಂಟ್‌ ಹೊರಡಿಸಿ ಆದೇಶಿಸಿದರು. ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ವಕೀಲ ಸೂರ್ಯ ಮುಕುಂದರಾಜ್‌ ಹಾಜರಾಗಿದ್ದರು.

Kannada Bar & Bench
kannada.barandbench.com