[ಹನುಮಾನ್ ಚಾಲೀಸಾ ವಿವಾದ] ದೇಶದ್ರೋಹ ಪ್ರಕರಣದಲ್ಲಿ ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಜಾಮೀನು

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ ನಂತರ ಈ ಇಬ್ಬರು ಸ್ವತಂತ್ರ ಜನಪ್ರತಿನಿಧಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
Navneet Rana and Ravi Rana
Navneet Rana and Ravi Rana
Published on

ಹನುಮಾನ್ ಚಾಲೀಸಾ ಪಠಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂಸದೆ ನವನೀತ್ ರಾಣಾ ಮತ್ತವರ ಪತಿ ವಿಧಾನಸಭಾ ಸದಸ್ಯ ರವಿ ರಾಣಾ ಅವರಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಅರ್ಜಿದಾರರು ತಲಾ ₹ 50,000 ಜಾಮೀನು ಬಾಂಡ್‌ ಸಲ್ಲಿಸಬೇಕು. ಮಾಧ್ಯಮಗಳೊಂದಿಗೆ ಮಾತನಾಡಬಾರದು. ಇಂಥದ್ದೇ ತಪ್ಪೆಸಗಬಾರದು ಇತ್ಯಾದಿ ಸೂಚನೆಗಳನ್ನು ವಿಶೇಷ ನ್ಯಾಯಾಧೀಶ ಆರ್‌ ಎನ್‌ ರೋಕಡೆ ನೀಡಿದ್ದಾರೆ.

Also Read
ಹನುಮಾನ್ ಚಾಲೀಸಾ ಪ್ರಕರಣ: ಎಫ್ಐಆರ್ ರದ್ದತಿ ಕೋರಿದ್ದ ರಾಣಾ ದಂಪತಿ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ ನಂತರ ಈ ಇಬ್ಬರೂ ಪಕ್ಷೇತರ ಜನಪ್ರತಿನಿಧಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ದಂಪತಿ ಮೇಲೆ ಆರಂಭದಲ್ಲಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡುವುದು), ಸೆಕ್ಷನ್ 34ರ (ಸಾಮಾನ್ಯ ಉದ್ದೇಶ) ಅಡಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಸರ್ಕಾರಕ್ಕೆ ಸವಾಲು ಹಾಕಿ ಮುಖ್ಯಮಂತ್ರಿ ವಿರುದ್ಧ ಟೀಕೆ ಮಾಡಿದ್ದಕ್ಕಾಗಿ ಸೆಕ್ಷನ್ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Kannada Bar & Bench
kannada.barandbench.com