ಧರ್ಮ ಸಂಸದ್ ದ್ವೇಷ ಭಾಷಣ: ವಸ್ತುಸ್ಥಿತಿ ವರದಿ ಸಲ್ಲಿಸಲು ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ [ಚುಟುಕು]

ಧರ್ಮ ಸಂಸದ್ ದ್ವೇಷ ಭಾಷಣ: ವಸ್ತುಸ್ಥಿತಿ ವರದಿ ಸಲ್ಲಿಸಲು ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ [ಚುಟುಕು]
Haridwar hate speech

ಕಳೆದ ವರ್ಷ ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ ಘಟನೆ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. “ಇಂಥದ್ದೇ ಒಂದು ಕಾರ್ಯಕ್ರಮ ಬರುವ ಭಾನುವಾರ ನಡೆಯಲಿದೆ” ಎಂದು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ನ್ಯಾಯವಾದಿ ಕಪಿಲ್‌ ಸಿಬಲ್‌ ವಿಚಾರಣೆ ವೇಳೆ ಮಾಹಿತಿ ನೀಡಿದರು. ಆಗ ಪ್ರಕರಣವನ್ನು ಶುಕ್ರವಾರಕ್ಕೆ ಪಟ್ಟಿ ಮಾಡುವಂತೆ ನ್ಯಾಯಾಲಯ ತಿಳಿಸಿ ಉತ್ತರಾಖಂಡ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.