ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣ: ಡಿಸೆಂಬರ್‌ 6ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಪ್ರಕರಣದಲ್ಲಿ ಅರ್ಜಿದಾರರನ್ನು ಖುದ್ದು ವಿಚಾರಣೆಗೆ ಹಾಜರಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದ ಪ್ರಕ್ರಿಯೆಗೆ ಅಡ್ಡಿಯಾದಂತಾಗಿದೆ ಎಂದು ಆಕ್ಷೇಪಿಸಿದ ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್.
B S Yediyurappa and Karnataka HC
B S Yediyurappa and Karnataka HC
Published on

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸಮಯಾಭಾವದ ಹಿನ್ನೆಲೆಯಲ್ಲಿ ಕರ್ನಾಟಕ  ಹೈಕೋರ್ಟ್ ಶುಕ್ರವಾರಕ್ಕೆ (ಡಿ.6) ಮತ್ತೆ ಮುಂದೂಡಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.

Also Read
ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆ ಡಿ.2ಕ್ಕೆ ಮುಂದೂಡಿಕೆ; ಮಧ್ಯಂತರ ಆದೇಶ ವಿಸ್ತರಣೆ

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಅವರು ಪ್ರಕರಣದಲ್ಲಿ ಅರ್ಜಿದಾರರ ಖುದ್ದು ವಿಚಾರಣೆಗೆ ಹಾಜರಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. ಇದರಿಂದ ವಿಚಾರಣಾಧೀನ ನ್ಯಾಯಾಲಯದ ಪ್ರಕ್ರಿಯೆಗೆ ಅಡ್ಡಿಯಾದಂತಾಗಿದೆ. ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿಧಿಸಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿದರು.

ಇದಕ್ಕೆ ಪೀಠವು ಶುಕ್ರವಾರ ಎಲ್ಲವನ್ನೂ ತೀರ್ಮಾನಿಸೋಣ ಎಂದು ವಿಚಾರಣೆ ಮುಂದೂಡಿತು.

Kannada Bar & Bench
kannada.barandbench.com