ಬಸವರಾಜನ್‌ ದಂಪತಿ ವಿರುದ್ಧದ ಪ್ರಕರಣದ ತನಿಖಾ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಆಕ್ಷೇಪಣೆ ಸಲ್ಲಿಸಲು ಗೃಹ ಇಲಾಖೆ ಮತ್ತು ಚಿತ್ರದುರ್ಗದ ಗ್ರಾಮೀಣ ಠಾಣೆ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದ ಪೀಠವು ವಿಚಾರಣೆಯನ್ನು ಫೆಬ್ರುವರಿ 10ಕ್ಕೆ ಮುಂದೂಡಿದೆ.
Soubhagya, S K Basavarajan and Murugha Mutt, Chitradurga
Soubhagya, S K Basavarajan and Murugha Mutt, Chitradurga

ಚಿತ್ರದುರ್ಗದ ಮುರುಘಾ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್‌ ಕೆ ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ವಿರುದ್ಧದ ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ಚಿತ್ರದುರ್ಗದ ಗ್ರಾಮೀಣ ಠಾಣೆಯಲ್ಲಿ ಬಸವರಾಜನ್‌ ದಂಪತಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯ ಹೊಣೆಯನ್ನು ಹಿರಿಯ ಮಹಿಳಾ ಅಧಿಕಾರಿಗೆ ವಹಿಸುವಂತೆ ಕೋರಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಚಿತ್ರದುರ್ಗದ ಗ್ರಾಮೀಣ ಠಾಣೆಯಲ್ಲಿ ಬಸವರಾಜನ್‌ ದಂಪತಿ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 120ಬಿ, 384, 420 ಮತ್ತು 366ಎ ಅಡಿ ದಾಲಾಗಿರುವ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆಕ್ಷೇಪಣೆ ಸಲ್ಲಿಸಲು ಗೃಹ ಇಲಾಖೆ ಮತ್ತು ಚಿತ್ರದುರ್ಗದ ಗ್ರಾಮೀಣ ಠಾಣೆ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದ ಪೀಠವು ವಿಚಾರಣೆಯನ್ನು ಫೆಬ್ರುವರಿ 10ಕ್ಕೆ ಮುಂದೂಡಿ ಆದೇಶಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪರಮೇಶ್ವರ್‌ ಹೆಗ್ಡೆ ಅವರು “ತನಿಖಾಧಿಕಾರಿಯು ಬಸವರಾಜನ್ ಪರ ಕೆಲಸ ಮಾಡುತ್ತಿದ್ದಾರೆ. ಹಿರಿಯ ಮಹಿಳಾ ಅಧಿಕಾರಿಯನ್ನು ತನಿಖಾಧಿಕಾರಿ ಆಗಿ ನೇಮಿಸಬೇಕು" ಎಂದು ಕೋರಿದರು.

Also Read
ಎಫ್‌ಐಆರ್‌ ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿ ಸೌಭಾಗ್ಯ

ಚಿತ್ರದುರ್ಗದ ಗ್ರಾಮೀಣ ಠಾಣೆಯ ಪೊಲೀಸರು ವೃತ್ತಿಪರವಲ್ಲದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಕಾನೂನಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲ್ನೋಟಕ್ಕೆ ಅಪರಾಧ ಕಾಣಿಸುವಂಥ ದಾಖಲೆಗಳನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹಾಲಿ ಪ್ರಕರಣದಲ್ಲಿನ ಸತ್ಯದ ಅನಾವರಣವು ಕೆಲವು ವ್ಯಕ್ತಿಗಳನ್ನು ಮತ್ತೊಂದು ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸುವ ಪ್ರಕರಣದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ರಿಮ್ಯಾಂಡ್‌ ಅರ್ಜಿಯಲ್ಲಿ ಅಗತ್ಯಬಿದ್ದರೆ ಮಾದರಿ ಸಂಗ್ರಹ ಮಾಡಲಾಗದು. ಬೇಕಾದಲ್ಲಿ ಅಗತ್ಯ ವಿಧಿವಿಜ್ಞಾನ ಪ್ರಯೋಗಾಲಯ ವರದಿ ಪಡೆಯಲಾಗುವುದು. ಅಗತ್ಯವೆನಿಸಿದರೆ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗದು ಎಂದು ಹೇಳಲಾಗಿದೆ.

Related Stories

No stories found.
Kannada Bar & Bench
kannada.barandbench.com