

ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾಗಿರುವ ಗೋವಿಂದ ಕಾರಜೋಳ ಅವರ ಆಯ್ಕೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಚುನಾವಣಾ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಮೇದುವಾರಿಕೆ ಸಲ್ಲಿಸಿ ನಾಮಪತ್ರ ತಿರಸ್ಕೃತಗೊಂಡಿದ್ದ ವಿ ಎಸ್ ಮಂಜುನಾಥ್ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ಪ್ರಜಾಪ್ರತಿನಿಧಿ ಕಾಯಿದೆ-1951ರ ಸೆಕ್ಷನ್ 109ರಲ್ಲಿ ಅವಕಾಶವಿರುವಂತೆ ಚುನಾವಣಾ ತಕರಾರು ಅರ್ಜಿಯನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದರು. ಇದನ್ನು ಪರಿಗಣಿಸಿದ ಪೀಠವು ಅರ್ಜಿ ವಾಪಸ್ ಪಡೆದುಕೊಳ್ಳುತ್ತಿರುವ ಬಗ್ಗೆ ಸ್ವತಃ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಆದೇಶಿಸಿತು.