ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣ: ಮಧ್ಯಂತರ ಆದೇಶ ವಿಸ್ತರಣೆ; ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ) ಸೆಕ್ಷನ್ 35ರ ಪ್ರಕಾರ ಅಪರಾಧದ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ ಎಂದ ಎಸ್‌ಪಿಪಿ.
B S Yediyurappa and Karnataka HC
B S Yediyurappa and Karnataka HC
Published on

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಮತ್ತೆ ವಿಸ್ತರಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಮತ್ತು ಜಾಮೀನು ಕೋರಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು “ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ) ಸೆಕ್ಷನ್ 35ರ ಪ್ರಕಾರ ಅಪರಾಧದ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆ ಆದೇಶ ತೆರವುಗೊಳಿಸಬೇಕು” ಎಂದು ಮನವಿ ಮಾಡಿದರು.

ಆದರೆ ಇದನ್ನು ಒಪ್ಪದ ಪೀಠವು “ಒಟ್ಟಿಗೇ ಎಲ್ಲವನ್ನೂ ಸೇರಿಸಿ ಗೊಂದಲ ಮಾಡಿಕೊಳ್ಳುವುದು ಬೇಡ, ವಿಚಾರಣೆ ನಡೆಸಿ ಇತ್ಯರ್ಥಪಡಿಸೋಣ” ಎಂದು ಹೇಳಿ ಸೆಪ್ಟೆಂಬರ್ 27ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಿತು.

Kannada Bar & Bench
kannada.barandbench.com