ಸಂಜೆ ನ್ಯಾಯಾಲಯಗಳ ಸ್ಥಾಪನೆ: ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸಲು ಪ್ರಧಾನ ಜಿಲ್ಲಾ ನ್ಯಾಯಾಧೀಶರುಗಳಿಗೆ ನಿರ್ದೇಶನ

ಸಂಜೆ ನ್ಯಾಯಾಲಯಗಳ ಸ್ಥಾಪನೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆ ಕುರಿತ ಪರಿಕಲ್ಪನಾ ಟಿಪ್ಪಣಿಯನ್ನು ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧೀನ ಕಾರ್ಯದರ್ಶಿಗಳು 2025ರ ಮಾರ್ಚ್ 4ರಂದು ರಾಜ್ಯ ಹೈಕೋರ್ಟ್‌ಗೆ ಕಳುಹಿಸಿದ್ದಾರೆ.
Karnataka High Court
Karnataka High Court
Published on

ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ಎಲ್ಲಾ ಜಿಲ್ಲೆಗಳ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಪತ್ರ ರವಾನಿಸಿದೆ.

ಬೆಂಗಳೂರು ಜಿಲ್ಲೆಯ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೇರಿ ರಾಜ್ಯದ 30 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಜುಲೈ 17ರಂದು ಪತ್ರ ರವಾನಿಸಿದ್ದು, ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳನ್ನು ಆರಂಭಿಸುವ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಸಲುವಾಗಿ ಆಯಾ ಜಿಲ್ಲೆಗಳ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸುವಂತೆ ಹಾಗೂ ಕ್ರೋಢೀಕೃತ ವರದಿಯನ್ನು 3 ತಿಂಗಳ ಒಳಗೆ ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಸಂಜೆ ನ್ಯಾಯಾಲಯಗಳ ಸ್ಥಾಪನೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆ ಕುರಿತ ಪರಿಕಲ್ಪನಾ ಟಿಪ್ಪಣಿಯನ್ನು ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧೀನ ಕಾರ್ಯದರ್ಶಿಗಳು 2025ರ ಮಾರ್ಚ್ 4ರಂದು ರಾಜ್ಯ ಹೈಕೋರ್ಟ್‌ಗೆ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸಲು ಹೈಕೋರ್ಟ್ ಮುಂದಾಗಿದೆ.

Kannada Bar & Bench
kannada.barandbench.com