ಮುರುಘಾ ಶ್ರೀ ವಿರುದ್ಧ ಬಸವರಾಜನ್‌ ಸಾಕ್ಷ್ಯ ಪರಿಗಣಿಸಲು ನಕಾರ: ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಶರಣರ ವಿರುದ್ಧದ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದ ಸಮಯದಲ್ಲಿ ಎಸ್‌ ಕೆ ಬಸವರಾಜನ್‌ ತಮ್ಮ ಎರಡು ಸಾಕ್ಷ್ಯಗಳನ್ನು ಪರಿಗಣಿಸುವಂತೆ ಸತ್ರ ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಯನ್ನು ಸತ್ರ ನ್ಯಾಯಾಲಯ ತಿರಸ್ಕರಿಸಿತ್ತು. 
Karnataka HC and Shivamurthy Muruga Sharanaru
Karnataka HC and Shivamurthy Muruga Sharanaru
Published on

ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಸಾಕ್ಷಿಯಾಗಿರುವ ಎಸ್‌ ಕೆ ಬಸವರಾಜನ್‌ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಶರಣರ ವಿರುದ್ಧದ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದ ಸಮಯದಲ್ಲಿ ಎಸ್‌ ಕೆ ಬಸವರಾಜನ್‌ ತಮ್ಮ ಎರಡು ಸಾಕ್ಷ್ಯಗಳನ್ನು ಪರಿಗಣಿಸುವಂತೆ ಸತ್ರ ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಯನ್ನು ಸತ್ರ ನ್ಯಾಯಾಲಯ ತಿರಸ್ಕರಿಸಿತ್ತು. 

ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಬುಧವಾರ ಬಸವರಾಜನ್‌ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.

Also Read
ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮುರುಘಾ ಶ್ರೀ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

“ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿ ಇಬ್ಬರು ಬಾಲಕಿಯರು ಸಲ್ಲಿಸಿದ್ದ ದೂರನ್ನು ಆಧರಿಸಿ, ಶಿವಮೂರ್ತಿ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ–2012) ಪ್ರಕರಣವನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯ, ಸುಪ್ರೀಂ ಕೋರ್ಟ್‌ ನಿರ್ದೇಶನದ ಅನುಸಾರ ನಿಗದಿತ ಸಮಯದ ಚೌಕಟ್ಟಿನಲ್ಲಿ ವಿಚಾರಣೆ ನಡೆಸುತ್ತಿದೆ.

Kannada Bar & Bench
kannada.barandbench.com