ಧಾರವಾಡ ಪ್ರವೇಶಕ್ಕೆ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್‌

ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಧೀನ ನ್ಯಾಯಾಲಯದ ಆದೇಶದಲ್ಲಿ ಬದಲಾವಣೆ ಮಾಡುವಂತೆ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಜಾ ಮಾಡಿದೆ.
Vinay Kulkarni and Karnataka HC
Vinay Kulkarni and Karnataka HC
Published on

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಕರ್ನಾಟಕ ಹೈಕೋರ್ಟ್‌ ಅನುಮತಿ ನಿರಾಕರಿಸಿದೆ.

ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಧೀನ ನ್ಯಾಯಾಲಯದ ಆದೇಶದಲ್ಲಿ ಬದಲಾವಣೆ ಮಾಡುವಂತೆ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಶನಿವಾರ ವಜಾ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Also Read
ಧಾರವಾಡ ಪ್ರವೇಶ: ಒಂದಿಲ್ಲೊಂದು ಆಧಾರದಲ್ಲಿ ವಿನಯ್‌ ಕುಲಕರ್ಣಿಯಿಂದ ಅರ್ಜಿ ಸಲ್ಲಿಕೆ ಎಂದು ಮನವಿ ವಜಾ ಮಾಡಿದ ನ್ಯಾಯಾಲಯ

ಶಾಸಕನಾಗಿರುವ ಕಾರಣಕ್ಕಾಗಿ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ನೀಡಬೇಕು ಎಂದು ವಿನಯ್‌ ಕುಲಕರ್ಣಿ ಕೋರಿದ್ದರು. ಈ ಹಿಂದೆ ಸತ್ರ ನ್ಯಾಯಾಲಯ, ಹೈಕೋರ್ಟ್‌ ಕುಲಕರ್ಣಿ ಕೋರಿಕೆಯನ್ನು ವಜಾಗೊಳಿಸಿದ್ದವು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ ಎಚ್‌ ಹನುಮಂತರಾಯ ವಾದಿಸಿದ್ದರು. ಸಿಬಿಐ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್‌ ವಾದಿಸಿದ್ದರು.

Kannada Bar & Bench
kannada.barandbench.com