57 ಸಿವಿಲ್‌ ನ್ಯಾಯಾಧೀಶರ ನೇರ ನೇಮಕಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದ ಹೈಕೋರ್ಟ್‌; ಏಪ್ರಿಲ್‌ 10ರ ಗಡುವು

ಹೈಕೋರ್ಟ್‌ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ. ವೇತನ ಶ್ರೇಣಿಯು 27,700 ರೂಪಾಯಿಯಿಂದ 44,770 ರೂಪಾಯಿವರೆಗೆ ಇರಲಿದೆ ಎಂದು ವಿವರಿಸಲಾಗಿದೆ.
Civil Judge Exam
Civil Judge Exam
Published on

ಬ್ಯಾಕ್‌ಲಾಗ್‌ ಹುದ್ದೆಗಳು ಸೇರಿದಂತೆ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ತುಂಬಲು 57 ಸಿವಿಲ್‌ ನ್ಯಾಯಾಧೀಶರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಹೈಕೋರ್ಟ್‌ ಈಚೆಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್‌ 10 ಕೊನೆಯ ದಿನವಾಗಿದೆ.

ಕರ್ನಾಟಕ ನ್ಯಾಯಿಕ ಸೇವಾ (ನೇಮಕಾತಿ) ನಿಯಮ 2004, 2011, 2015 ಮತ್ತು 2016ರ ತಿದ್ದುಪಡಿ ನಿಯಮಗಳ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ನೊಂದಾಯಿತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ಕಡ್ಡಯವಾಗಿ ವಕೀಲರಾಗಿ ನೋಂದಣಿ ಮಾಡಿಸಿರಬೇಕು. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದವರಿಗೆ 38 ವಯೋಮಿತಿ, ಇತರೆ ಸಮುದಾಯಕ್ಕೆ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಾಗಿದ್ದರೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ ಎಂದು ವಿವರಿಸಲಾಗಿದೆ.

ಹೈಕೋರ್ಟ್‌, ಜಿಲ್ಲಾ ನ್ಯಾಯಾಂಗದ ಸಿಬ್ಬಂದಿ, ಪ್ರಾಸಿಕ್ಯೂಷನ್‌ ಮತ್ತು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್‌ ಹಾಗೂ ಹೆಚ್ಚುವರಿ ಸರ್ಕಾರಿ ವಕೀಲರಾಗಿ ಸೇವಾ ನಿರತ ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಲಾಗುತ್ತಿದೆ. ಇವರೂ ಸಹ ನೊಂದಾಯಿತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದವರಿಗೆ 43 ವಯೋಮಿತಿ, ಇತರೆ ಸಮುದಾಯಕ್ಕೆ 40 ವರ್ಷ ವಯೋಮಿತಿ ಮೀರಿರಬಾರದು ಎಂದು ಹೇಳಲಾಗಿದೆ.

ಹೈಕೋರ್ಟ್‌ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ. ವೇತನ ಶ್ರೇಣಿಯು 27,700 ರೂಪಾಯಿಯಿಂದ 44,770 ರೂಪಾಯಿವರೆಗೆ ಇರಲಿದೆ ಎಂದು ಹೈಕೋರ್ಟ್‌ನ ಸಿವಿಲ್‌ ನ್ಯಾಯಾಧೀಶರುಗಳ ನೇಮಕಾತಿ ಸಮಿತಿಯ ಮಹಾವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ ಎಸ್‌ ಭರತ್‌ ಕುಮಾರ್‌ ತಿಳಿಸಿದ್ದಾರೆ.

Attachment
PDF
Direct Recruitment to the post of Civil Judge.pdf
Preview
Kannada Bar & Bench
kannada.barandbench.com