ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಸ್ಥಾನ ಅನೂರ್ಜಿತಗೊಳಿಸಲು ಹೈಕೋರ್ಟ್‌ ನಕಾರ

ಸೂರಜ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಿಳಿಸಿಲ್ಲ ಎಂದು ಆಕ್ಷೇಪಿಸಲಾಗಿತ್ತು.
Dr. Suraj Revanna and Karnataka HC
Dr. Suraj Revanna and Karnataka HC

ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ವಿಧಾನ ಪರಿಷತ್‌ ಸದಸ್ಯರಾಗಿರುವ ಡಾ. ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮ ಸಮುದ್ರ ಗ್ರಾಮದ ಎಲ್ ಹನುಮೇಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Also Read
ವಿಧಾನ ಪರಿಷತ್ ಸದಸ್ಯತ್ವ ರದ್ದು ಪ್ರಕರಣ: ಸೂರಜ್‌ಗೆ ನೋಟಿಸ್‌ ಜಾರಿ ಮಾಡಲು ಮ್ಯಾಜಿಸ್ಟ್ರೇಟ್‌ಗೆ ಆದೇಶಿಸಿದ ಹೈಕೋರ್ಟ್‌

ಸೂರಜ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಿಳಿಸಿಲ್ಲ. ಅಲ್ಲದೆ, ಪತ್ನಿಯ ವಿವರ, ನಗದು, ಸ್ಥಿರಾಸ್ತಿ, ಬ್ಯಾಂಕ್ ಖಾತೆ, ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಮತ್ತಿತರ ವಿವರಗಳನ್ನು ನಮೂದಿಸುವ ಕಾಲಂನಲ್ಲಿ; ‘ಅನ್ವಯವಾಗುವುದಿಲ್ಲ‘ ಎಂದು ತಿಳಿಸಿದ್ದಾರೆ. ಜೊತೆಗೆ, ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಿಲ್ಲ. ಚುನಾವಣೆಯಲ್ಲಿ ಅಕ್ರಮ ಸಹ ಎಸಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

Kannada Bar & Bench
kannada.barandbench.com