[ಹಿಜಾಬ್‌ ನಿಷೇಧ] ನಾಳೆ ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್‌

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಜೆ ಎಂ ಖಾಜಿ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಲಿದೆ.
[ಹಿಜಾಬ್‌ ನಿಷೇಧ] ನಾಳೆ ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್‌

Hijab Row, Karnataka High Court

ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳಿಗೆ ಸಂಬಂಧಿಸಿದ ತೀರ್ಪನ್ನು ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಜೆ ಎಂ ಖಾಜಿ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಲಿದೆ.

Also Read
ಹಿಜಾಬ್‌ ನಿಷೇಧ: ಹನ್ನೊಂದು ದಿನ ಪಕ್ಷಕಾರರ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್‌

11 ದಿನ ಸುದೀರ್ಘ ವಿಚಾರಣೆ ನಡೆಸಿದ್ದ ಪೂರ್ಣ ಪೀಠವು ಫೆಬ್ರವರಿ 25ರಂದು ತೀರ್ಪು ಕಾಯ್ದಿರಿಸಿತ್ತು. ಸರಿ ಸುಮಾರು 23.5 ತಾಸು ವಿಚಾರಣೆ ಆಲಿಸಿರುವ ಪೀಠವು 17 ದಿನಗಳ ಬಳಿಕ ತೀರ್ಪು ಪ್ರಕಟಿಸಲಿದೆ.

Related Stories

No stories found.