ಕೆಆರ್‌ ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆಗಳ ತೆರವು, ಪರವಾನಗಿ ನವೀಕರಣಕ್ಕೆ ಬಿಬಿಎಂಪಿಗೆ ಹೈಕೋರ್ಟ್‌ನಿಂದ 3 ತಿಂಗಳ ಗಡುವು

ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿರುವ ಒಟ್ಟು 24 ಮಳಿಗೆಗಳನ್ನು ತೆರವುಗೊಳಿಸಲಾಗುವುದು. ಒಟ್ಟು 1,266 ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.
ಕೆಆರ್‌ ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆಗಳ ತೆರವು, ಪರವಾನಗಿ ನವೀಕರಣಕ್ಕೆ ಬಿಬಿಎಂಪಿಗೆ ಹೈಕೋರ್ಟ್‌ನಿಂದ 3 ತಿಂಗಳ ಗಡುವು
KR Market and Karnataka HC

ಬೆಂಗಳೂರು ನಗರದ ಕೃಷ್ಣರಾಜ ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳ ತೆರವು ಕಾರ್ಯಾಚರಣೆ ಮತ್ತು ಗುತ್ತಿಗೆ ಅವಧಿ ಮುಕ್ತಾಯವಾಗಿರುವ ಮಳಿಗೆಯ ಪರವಾನಗಿ ನವೀಕರಣ ಕಾರ್ಯವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ನಿರ್ದೇಶಿಸಿದೆ.

ಕೃಷ್ಣರಾಜ ಮಾರುಕಟ್ಟೆ ಸಂಕೀರ್ಣದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳನ್ನು ತೆರವುಗೊಳಿಸಲು ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ ‘ಬೆಂಗಳೂರು ಹೂವು ವ್ಯಾಪಾರಿಗಳ ಸಂಘ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.

Also Read
ಬೆಂಗಳೂರಿನ ರಸ್ತೆಗಳಲ್ಲಿ ಇರುವುದು ಕೇವಲ 400 ಗುಂಡಿ ಅನ್ನುವುದು ನಿಜವೇ? ಬಿಬಿಎಂಪಿ ವಿರುದ್ಧ ಹೈಕೋರ್ಟ್ ಕಿಡಿ

ಇದಕ್ಕೂ ಮುನ್ನ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಅಮಿತ್‌ ದೇಶಪಾಂಡೆ ಅವರು ಪ್ರಮಾಣಪತ್ರ ಸಲ್ಲಿಸಿ “ಕೆ ಆರ್ ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗಾಗಿ ಮೀಸಲಿಟ್ಟದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಗಳಿಗೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿರುವ ಒಟ್ಟು 24 ಮಳಿಗೆಗಳನ್ನು ತೆರವುಗೊಳಿಸಲಾಗುವುದು. ಒಟ್ಟು 1,266 ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ತಿಳಿಸಿದರು.

ಈ ಹೇಳಿಕೆ ದಾಖಲಿಸಿಕೊಂಡ ಪೀಠವು ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿ ನಿರ್ಮಿಸಿರುವ 24 ಮಳಿಗೆಗಳನ್ನು ಕೂಡಲೇ ತೆರವುಗೊಳಿಸಬೇಕು. ಗುತ್ತಿಗೆ ಅವಧಿ ಮುಗಿದಿರುವ ಮಳಿಗೆಗಳ ಪರವಾನಗಿಯನ್ನು ಕಾನೂನು ಪ್ರಕಾರ ನವೀಕರಿಸುವ ವಿಚಾರವು ಬಿಬಿಎಂಪಿಗೆ ಬಿಟ್ಟ ವಿಚಾರ. ಒಂದೊಮ್ಮೆ ನವೀಕರಿಸಲು ಮಂದಾದರೆ ಮೂರು ತಿಂಗಳಲ್ಲಿ ಆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

Related Stories

No stories found.
Kannada Bar & Bench
kannada.barandbench.com