ಬಿಸಿಲ ಝಳ ಹೆಚ್ಚಳ: ಹೈಕೋರ್ಟ್‌ನ ಕಲಬುರ್ಗಿ ಪೀಠ ಸೇರಿ ಎಂಟು ಜಿಲ್ಲಾ ನ್ಯಾಯಾಲಯಗಳ ಕಲಾಪದ ಸಮಯದಲ್ಲಿ ಬದಲಾವಣೆ

ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ಬೆಳಗಾವಿ ವಿಭಾಗದ ಬಾಗಲಕೋಟೆ, ವಿಜಯಪುರ ಜಿಲ್ಲಾ ನ್ಯಾಯಾಂಗ ಮತ್ತು ಹೈಕೋರ್ಟ್‌ನ ಕಲಬುರ್ಗಿ ಪೀಠದಲ್ಲಿ ಕಲಾಪಗಳು ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡು 1.30ಕ್ಕೆ ಮುಗಿಯಲಿವೆ.
Karnataka HC, Kalburgi Bench
Karnataka HC, Kalburgi Bench
Published on

ಬಿಸಿಲ ಬೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠದಲ್ಲಿ ಕಲಾಪದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8ಕ್ಕೆ ಆರಂಭವಾಗುವ ಕಲಾಪವು ಮಧ್ಯಾಹ್ನ 1.30ಕ್ಕೆ ಮುಗಿಯಲಿದೆ. ಇದೇ ನಿಯಮವನ್ನು ಕಲಬುರ್ಗಿ ಮತ್ತು ಬೆಳಗಾವಿ ವಿಭಾಗದ ಎಂಟು ಜಿಲ್ಲಾ ನ್ಯಾಯಾಂಗಕ್ಕೂ ವಿಸ್ತರಿಸಲಾಗಿದೆ.

ಏಪ್ರಿಲ್‌ 3ರಿಂದ ಸಮಯ ಬದಲಾವಣೆ ಜಾರಿಗೆ ಬಂದಿದ್ದು, ಮೇ 31ರವರೆಗೂ ಮುಂದುವರಿಯಲಿದೆ ಎಂದು ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್‌ ಭರತ್‌ ಕುಮಾರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಹಾಗೂ ಬೆಳಗಾವಿ ವಿಭಾಗದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾ ನ್ಯಾಯಾಂಗ ಮತ್ತು ಹೈಕೋರ್ಟ್‌ನ ಕಲಬುರ್ಗಿ ಪೀಠದಲ್ಲಿ ಕಲಾಪಗಳು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, 11ರವರೆಗೆ ನಡೆಯಲಿದೆ. ಅರ್ಧ ತಾಸು ವಿರಾಮವಿರಲಿದ್ದು, ಆನಂತರ 11.30ರಿಂದ 1.30ರವರೆಗೆ ಕಲಾಪ ನಡೆಯಲಿದೆ.

ಕಚೇರಿಯು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದೆ. ಶನಿವಾರ ಇದಕ್ಕೆ ವಿನಾಯಿತಿ ಇರಲಿದೆ. ಶನಿವಾರ ಬೆಳಿಗ್ಗೆ 7.30ರಿಂದ 11.30ರವರೆಗೆ ಕಚೇರಿ ಕಾರ್ಯನಿರ್ವಹಿಸಲಿದೆ.

ಸಿವಿಲ್‌, ಕ್ರಿಮಿನಲ್‌, ಕೌಟುಂಬಿಕ ಮತ್ತು ಕಾರ್ಮಿಕ ನ್ಯಾಯಾಲಯಗಳಲ್ಲಿನ ಕಲಾಪದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, 26.04.2025 ಮತ್ತು 24.05.2025ರ ನಾಲ್ಕನೇ ಶನಿವಾರದಂದು ಜಿಲ್ಲಾ ನ್ಯಾಯಾಂಗದಲ್ಲಿ ಕಲಾಪವು 7.30ಕ್ಕೆ ಆರಂಭವಾಗಲಿದ್ದು, ಮಧ್ಯಾಹ್ನ 12ಕ್ಕೆ ಮುಕ್ತಾಯವಾಗಲಿದೆ. ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಗೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.

Attachment
PDF
Kalburgi bench
Preview
Attachment
PDF
District Judiciary
Preview
Kannada Bar & Bench
kannada.barandbench.com