ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ

ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯಿದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮವನ್ನು ಪರಿಚಯಿಸಲಾಗಿತ್ತು.
ಕ್ರಿಮಿನಲ್ ಕಾನೂನುಗಳು
ಕ್ರಿಮಿನಲ್ ಕಾನೂನುಗಳು

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಪರಿಚಯಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷರತಾ ಅಧಿನಿಯಮ ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿವೆ.

ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ವಾಹನದ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು ಸಂಭವಿಸಿದರೆ ಹತ್ತು ವರ್ಷಗಳ ಗರಿಷ್ಠ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ಮುಂದಾಗಿದ್ದ ಬಿಎನ್ಎಸ್‌ನ ಸೆಕ್ಷನ್ 106ರ ಉಪ ಸೆಕ್ಷನ್ (2) ಅನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಈ ಸೆಕ್ಷನ್‌ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಮೂರು ಮಸೂದೆಗಳಿಗೆ 2023ರ ಡಿಸೆಂಬರ್‌ನಲ್ಲಿ ಭಾರತದ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.

ಈ ಮೂರು ಕಾನೂನುಗಳನ್ನು ಮೊದಲು ಆಗಸ್ಟ್ 11, 2023 ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು.  ಅವುಗಳನ್ನು ಡಿಸೆಂಬರ್ 20ರಂದು ಲೋಕಸಭೆ ಹಾಗೂ ಡಿಸೆಂಬರ್ 21ರಂದು ರಾಜ್ಯಸಭೆ ಕ್ರಮವಾಗಿ ಅಂಗೀಕರಿಸಿದ್ದವು.

[ಕಾನೂನಿನ ಪ್ರತಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ]

Attachment
PDF
THE_BHARATIYA_NYAYA__SECOND__SANHITA__2023.pdf
Preview
Attachment
PDF
THE_BHARATIYA_NAGARIK_SURAKSHA__SECOND__SANHITA__2023.pdf
Preview
Attachment
PDF
THE_BHARATIYA_SAKSHYA__SECOND__BILL__2023.pdf
Preview
Kannada Bar & Bench
kannada.barandbench.com