Stray dog
Stray dog

ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣ: ಲಡಾಖ್ ಕೇಂದ್ರಾಡಳಿತ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದ ಕಾಶ್ಮೀರ ಹೈಕೋರ್ಟ್

ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಸ್ಥಳೀಯ ಜನರಲ್ಲಿ ಮಾತ್ರವಲ್ಲದೆ ಪ್ರವಾಸಿಗರಲ್ಲಿಯೂ ಭಯದ ವಾತಾವರಣ ಸೃಷ್ಟಿಸಿದೆ ಎಂದಿದೆ ನ್ಯಾಯಾಲಯ.
Published on

ನಾಯಿ ಕಡಿತ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿರುವ ಜಮ್ಮು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಲಡಾಖ್‌ ಕೇಂದ್ರಾಡಳಿತ ಪ್ರದೇಶ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ [ನ್ಯಾಯಾಲಯದ ಸ್ವಯಂಪ್ರೇರಿತ ಮೊಕದ್ದಮೆ ಮತ್ತು ಲಡಾಖ್‌ ಕೇಂದ್ರಾಡಳಿತ ಪ್ರದೇಶ ಸರ್ಕಾರ ನಡುವಣ ಪ್ರಕರಣ].

ಮುಖ್ಯ ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಮತ್ತು ನ್ಯಾಯಮೂರ್ತಿ ಸಂಜಯ್ ಧರ್ ಅವರಿದ್ದ ಪೀಠ ತನ್ನ ಸದಸ್ಯ ಕಾರ್ಯದರ್ಶಿ ಮೂಲಕ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು ಎರಡು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.

Also Read
[ಕೇರಳ ಬೀದಿನಾಯಿ ಪ್ರಕರಣ] ನಮ್ಮಲ್ಲಿ ಬಹುತೇಕರು ಶ್ವಾನಪ್ರಿಯರು ಆದರೆ ದಾಳಿಕೋರ ನಾಯಿಗಳನ್ನು ದೂರ ಇಡಬೇಕು: ಸುಪ್ರೀಂ

"ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ಬಂದ ಕೆಲ ಸಂಗತಿಗಳ ಆಧಾರದ ಮೇಲೆ ನ್ಯಾಯಾಲಯ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದೆ, ಇದರಲ್ಲಿ ಲಡಾಖ್‌ನಲ್ಲಿ ನೋಂದಾಯಿತ ನಾಯಿ ಕಡಿತದ ಪ್ರಕರಣಗಳು 2017ರಲ್ಲಿ 854ರಿಂದ 2022ರಲ್ಲಿ 2229ಕ್ಕೆ ಘಾತೀಯ ಪ್ರಮಾಣದಲ್ಲಿ ಹೆಚ್ಚಾಗಿವೆ. 2022 ಮತ್ತು 2023ರ ಜನವರಿಯಲ್ಲಿ ಸುಮಾರು 220 ಮಂದಿ ನಾಯಿಕಡಿತಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ" ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಸ್ಥಳೀಯ ಜನರಲ್ಲಿ ಮಾತ್ರವಲ್ಲದೆ ಪ್ರವಾಸಿಗರಲ್ಲಿಯೂ ಭಯದ ವಾತಾವರಣ ಸೃಷ್ಟಿಸಿದ್ದು ವರದಿಗಳ ಪ್ರಕಾರ ನಾಯಿಗಳು ಇತರ ಸಸ್ಯಾಹಾರಿ ಪ್ರಾಣಿಗಳ ಮೇಲೂ ದಾಳಿ ಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 19, 2023ರಂದು ನಡೆಯಲಿದೆ.

Kannada Bar & Bench
kannada.barandbench.com