ಅಮಿತ್‌ ಶಾ ಪ್ರಯತ್ನದಿಂದ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಭಾಗದಲ್ಲಿ ಶಾಂತಿಯ ಹೊಸ ಯುಗ ಆರಂಭ: ನ್ಯಾ. ಮಿಶ್ರಾ

ಭಯೋತ್ಪಾದಕರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಮೆರೆಸಲಾಗದು. ಮಾನವ ಹಕ್ಕುಗಳ ಪರ ಹೋರಾಟಗಾರರು ರಾಜಕೀಯ ದೌರ್ಜನ್ಯವನ್ನು ಖಂಡಿಸಬೇಕು ಎಂದು ನ್ಯಾ. ಮಿಶ್ರಾ ಹೇಳಿದ್ದಾರೆ.
Amit Shah, Justice Arun Mishra
Amit Shah, Justice Arun Mishra

ಕೇಂದ್ರ ಸಚಿವ ಅಮಿತ್‌ ಶಾ ಅವರ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದ್ದಾರೆ.

ಎನ್‌ಎಚ್‌ಆರ್‌ಸಿಯ 28ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಶ್ರಾ ಅವರು ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ರೂಪಿಸಿರುವ ಶ್ರೇಯಸ್ಸು ದೇಶದ ಜನತೆಗೆ ಮತ್ತು ನಾಯಕತ್ವಕ್ಕೆ ಸಲ್ಲಬೇಕು ಎಂದರು.

Also Read
ವಿದೇಶಿ ಶಕ್ತಿಗಳಿಂದ ಪ್ರೇರಿತವಾಗಿ ಭಾರತ ಮಾನವ ಹಕ್ಕು ಉಲ್ಲಂಘಿಸುತ್ತಿದೆ ಎನ್ನುವುದು ಹೊಸ ವಾಡಿಕೆ: ಅರುಣ್‌ ಮಿಶ್ರಾ

“ನಾನು ಆತ್ಮೀಯವಾಗಿ ಕೇಂದ್ರ ಸಚಿವ ಅಮಿತ್‌ ಶಾ ಅವರನ್ನು ಸ್ವಾಗತಿಸುತ್ತೇನೆ. ನಿಮ್ಮ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು-ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ” ಎಂದರು.

“20ನೇ ಶತಮಾನದಲ್ಲಿ ಪ್ರಪಂಚದಾದ್ಯಂತ ರಾಜಕೀಯ ದೌರ್ಜನ್ಯದಿಂದಾಗಿ 12 ಕೋಟಿ ಜನರು ಸಾವನ್ನಪ್ಪಿದ್ದಾರೆ. ಮುಗ್ಧ ಜನರನ್ನು ಹತ್ಯೆ ಮಾಡುವ ಕ್ರೂರಿಗಳನ್ನು ನಾವು ವಿಜೃಂಭಿಸಲಾಗದು. ಅಂಥ ಭಯೋತ್ಪಾದಕರನ್ನು ಸ್ವಾತಂತ್ರ್ಯ ಹೋರಾಟಗಾರರು ಎನ್ನಲಾಗದು. ಮಾನವ ಹಕ್ಕುಗಳನ್ನು ಪ್ರತಿಪಾದಿಸುವವರು ರಾಜಕೀಯ ಹಿಂಸಾಚಾರವನ್ನು ಖಂಡಿಸಬೇಕು” ಎಂದರು.

Related Stories

No stories found.
Kannada Bar & Bench
kannada.barandbench.com