ಪಶ್ಚಿಮ ಬಂಗಾಳದ ಜಯನಗರ ಪ್ರದೇಶದಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಅಪ್ರಾಪ್ತ ಬಾಲಕಿಯ ಮರಣೋತ್ತರ ಪರೀಕ್ಷೆಯನ್ನು ಕಲ್ಯಾಣಿಯಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಭಾನುವಾರ ನಿರ್ದೇಶನ ನೀಡಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ (ಪೋಕ್ಸೊ ಕಾಯ್ದೆ) ಸಂಬಂಧಿತ ಸೆಕ್ಷನ್‌ಗಳನ್ನೂ ಪ್ರಕರಣಕ್ಕೆ ಅನ್ವಯಿಸುವಂತೆ ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಯುವಾಗ ಬರುಯಿಪುರದ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಖುದ್ದು ಹಾಜರಿರಬೇಕು. ಈ ಪ್ರಕ್ರಿಯೆ ಬಗ್ಗೆ ಮೃತ ಸಂತ್ರಸ್ತೆಯ ಪೋಷಕರಿಗೂ ಮಾಹಿತಿ ನೀಡುವಂತೆ ಅದು ಸೂಚಿಸಿದೆ.
ಜಯನಗರದ ಮಹಿಸ್ಮರಿ ಅಕ್ಟೋಬರ್ 5 ರ ಮುಂಜಾನೆ ಪ್ರದೇಶದಲ್ಲಿ ಒಂಬತ್ತು ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು.