ಜಾರ್ಖಂಡ್ ಕಲ್ಲಿದ್ದಲು ಹಗರಣ: ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ತಪ್ಪಿತಸ್ಥ ಎಂದ ಸಿಬಿಐ ವಿಶೇಷ ನ್ಯಾಯಾಲಯ

ಅಕ್ಟೋಬರ್ 14 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆಗಳಿವೆ.
ಕೇಂದ್ರದ ಮಾಜಿ ಸಚಿವ ದಿಲೀಪ್ ರೇ
ಕೇಂದ್ರದ ಮಾಜಿ ಸಚಿವ ದಿಲೀಪ್ ರೇ
Published on

ಜಾರ್ಖಂಡ್ ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿದ್ದ ಕೇಂದ್ರ ಸರ್ಕಾರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆಗೆ ಗುರಿಪಡಿಸಿದೆ. 1999ರ ಪ್ರಕರಣ ಇದಾಗಿದೆ.

ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ಮಂಗಳವಾರ ರೇ ಹಾಗೂ ಇತರರನ್ನು ಕ್ರಿಮಿನಲ್ ಪಿತೂರಿ ಮತ್ತು ಇತರ ಅಪರಾಧಗಳಡಿ ಶಿಕ್ಷೆಗೊಳಪಡಿಸಿದ್ದಾರೆ.

ಕಲ್ಲಿದ್ದಲು ಸಚಿವಾಲಯದ ಇಬ್ಬರು ಮಾಜಿ ಹಿರಿಯ ಅಧಿಕಾರಿಗಳಾದ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯ ನಂದ್ ಗೌತಮ್ ಮತ್ತು ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್‌ನ ನಿರ್ದೇಶಕರನ್ನು ಕೂಡ ನ್ಯಾಯಾಲಯ ಶಿಕ್ಷೆಗೆ ಗುರಿಮಾಡಿದೆ.

Also Read
2ಜಿ ಹಗರಣ ಖುಲಾಸೆ ಪ್ರಕರಣ: ಶೀಘ್ರ ವಿಚಾರಣಾ ಮನವಿ ಕುರಿತು ಆದೇಶ ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಗಳನ್ನು ಮಾಡಿದ್ದ ವೇಳೆ ನಡೆದಿದ್ದ ಅಕ್ರಮಗಳ ಕುರಿತಾದ ಪ್ರಕರಣ ಇದಾಗಿದೆ.

ಅಕ್ಟೋಬರ್ 14 ರಂದು ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದ್ದು, ತೀರ್ಪಿನ ದಿನದಂದು ಪ್ರಕರಣದ ಆರೋಪಿಗಳೆಲ್ಲರೂ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ಸಮನ್ಸ್ ನೀಡಲಾಗಿದೆ.

Kannada Bar & Bench
kannada.barandbench.com