ಮೋದಿ ಕುರಿತ ಹೇಳಿಕೆ: ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಜಾರ್ಖಂಡ್ ಹೈಕೋರ್ಟ್ ನಕಾರ [ಚುಟುಕು]

Rahul Gandhi
Rahul Gandhi Facebook
Published on

ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಎಂಬ ಹೆಸರು ಏಕೆ ಇದೆ ಎಂದು ಪ್ರಶ್ನಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣಾ ಪ್ರಕ್ರಿಯೆ ರದ್ದುಗೊಳಿಸಲು ಜಾರ್ಖಂಡ್‌ ಹೈಕೋರ್ಟ್‌ ಇತ್ತೀಚೆಗೆ ನಿರಾಕರಿಸಿದೆ.

"ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿಯೇ ಇರಲಿ, ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಏಕೆ ಇದೆ?" ಎಂದು ರಾಹುಲ್‌ ಗಾಂಧಿ 2019ರಲ್ಲಿ ಪ್ರಶ್ನಿಸಿದ್ದನ್ನು ಮಾನಹಾನಿಕರ ಸಂಜ್ಞೇಯ ಅಪರಾಧವಾಗಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಪರಿಗಣಿಸಿತ್ತು. ನಂತರ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು. ಎಲ್ಲಾ ಆಕ್ಷೇಪಗಳನ್ನು ವಿಚಾರಣೆ ವೇಳೆ ಸಾಬೀತುಪಡಿಸುವ ಅಗತ್ಯವಿದೆ. ಈಗ ವಾಸ್ತವಾಂಶಗಳ ಕುರಿತು ಈ ನ್ಯಾಯಾಲಯ ನಿರ್ಧಾರಕ್ಕೆ ಬರುವ ಅಗತ್ಯವಿಲ್ಲ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ದ್ವಿವೇದಿ ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ಜಾಲತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com