ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ರೌಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆದೇಶ ಮಾಡಿದ್ದಾರೆ.
Arvind Kejriwal and Tihar Jail
Arvind Kejriwal and Tihar Jail

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ವಿಶೇಷ ನ್ಯಾಯಾಲಯವು ಮಂಗಳವಾರ ಮೇ 7ರವರೆಗೆ ವಿಸ್ತರಿಸಿದೆ.

ಪ್ರಕರಣದ ಸಂಬಂಧ ರೌಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆದೇಶ ಮಾಡಿದ್ದಾರೆ. ಮೇ 7ರಂದು ಮಧ್ಯಾಹ್ನ 2 ಗಂಟೆಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೇಜ್ರಿವಾಲ್‌ ಅವರನ್ನು ಹಾಜರುಪಡಿಸುವಂತೆ ನ್ಯಾಯಾಧೀಶೆ ಕಾವೇರಿ ಬವೇಜಾ ಆದೇಶಿಸಿದ್ದಾರೆ.

Also Read
ಇ ಡಿ ಮಾವು ವಾದ: ಕೇಜ್ರಿವಾಲ್ ಮನೆ ಊಟ ನಿಗದಿತ ಆಹಾರಕ್ಕಿಂತ ಬೇರೆಯಾಗಿದೆ ಎಂದ ದೆಹಲಿ ನ್ಯಾಯಾಲಯ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರ ಕೇಜ್ರಿವಾಲ್‌ ಎಂದು ಮಾರ್ಚ್‌ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾ ಮಾಡಿದ ಬೆನ್ನಿಗೇ ಅವರನ್ನು ಬಂಧಿಸಲಾಗಿತ್ತು.

Kannada Bar & Bench
kannada.barandbench.com