ಆರು ವರ್ಷಗಳಲ್ಲಿ 22 ಸಾವಿರ ಪ್ರಕರಣ ವಿಲೇವಾರಿ ಮಾಡಿದ ದೇಶದ ಮೊದಲ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ನಾಗಪ್ರಸನ್ನ

ನ್ಯಾಯಮೂರ್ತಿ ನಾಗಪ್ರಸನ್ನ ಅವರು ಬುಧವಾರಕ್ಕೆ (ನ.26) ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಆರು ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಈ ದಾಖಲೆ ನಿರ್ಮಿಸಿದ ಕರ್ನಾಟಕ ಹೈಕೋರ್ಟ್‌ನ ಮೊದಲಿಗರು ಎನಿಸಿದ್ದಾರೆ.
Justice M Nagaprasanna and Karnataka HC
Justice M Nagaprasanna and Karnataka HC
Published on

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆರು ವರ್ಷಗಳ ಅವಧಿಯಲ್ಲಿ 21,924 ಸಾವಿರ ವಿವಿಧ ನಮೂನೆಗಳ ಪ್ರಕರಣಗಳನ್ನು ವಿಲೇವಾರಿ ಮಾಡಿರುವ ದೇಶದ ಹೈಕೋರ್ಟ್ ನ್ಯಾಯಮೂರ್ತಿಗಳಲ್ಲಿಯೇ ಅತ್ಯಂತ ವಿರಳ ಸಾಧನೆ ಮಾಡಿದ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರು ಬುಧವಾರಕ್ಕೆ (ನ.26) ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಆರು ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಈ ದಾಖಲೆ ನಿರ್ಮಿಸಿದ ಕರ್ನಾಟಕ ಹೈಕೋರ್ಟ್‌ನ ಮೊದಲಿಗರು ಎನಿಸಿದ್ದಾರೆ. 22 ಸಾವಿರ ತೀರ್ಪುಗಳಲ್ಲಿ 985 ಸೂಚಿತ (ರಿಪೋರ್ಟೆಡ್‌) ತೀರ್ಪುಗಳಾಗಿ ದಾಖಲಾಗಿವೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ 2019ರ ನವೆಂಬರ್ 26ರಂದು ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಸೇವಾವಧಿ 2033ರವರೆಗೂ ಇದೆ.

Kannada Bar & Bench
kannada.barandbench.com