ಈಚೆಗಷ್ಟೇ ಸೇವೆಯಿಂದ ನಿವೃತ್ತರಾದ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ ಎಸ್ ಮುರಳೀಧರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಕ್ಟೋಬರ್ 16 ರಂದು ಸುಪ್ರೀಂ ಕೋರ್ಟ್ ಅವರನ್ನು ಹಿರಿಯ ವಕೀಲರನ್ನಾಗಿ ನೇಮಿಸಿತು. ಸುಪ್ರೀಂ ಕೋರ್ಟ್ ಸಿಜೆಐ ಹಾಗೂ ಉಳಿದ ನ್ಯಾಯಮೂರ್ತಿಗಳಿದ್ದ ಪೂರ್ಣ ನ್ಯಾಯಾಲಯ ಈ ನಿರ್ಧಾರ ತೆಗೆದು ತೆಗೆದುಕೊಂಡಿತ್ತು.
ನ್ಯಾಯಮೂರ್ತಿ ಮುರಳೀಧರ್ ಅವರು ದೆಹಲಿ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ದೆಹಲಿ ಗಲಭೆಗಳ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವ ಬಗ್ಗೆ ವಿವಾದಾತ್ಮಕ ಅಭಿಪ್ರಾಯವ್ಯಕ್ತಪಡಿಸಿದ ಕೆಲ ದಿನಗಳಲ್ಲೇ ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು.
ಒಡಿಶಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ನಂತರ, ಅಂತಿಮವಾಗಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಶಿಫಾರಸು ಮಾಡಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಈ ವರ್ಷದ ಏಪ್ರಿಲ್‌ನಲ್ಲಿ ಕೊಲಿಜಿಯಂ ಪ್ರಸ್ತಾವನೆಯನ್ನು ಹಿಂಪಡೆದಿತ್ತು. ಮುರಳೀಧರ್ ಅವರು ಅಂತಿಮವಾಗಿ ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದರು.