ಸುಪ್ರೀಂ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ: ಸಂಖ್ಯಾಬಲ 32ಕ್ಕೆ ಏರಿಕೆ

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ಅವರು ಈ ಇಬ್ಬರೂ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
Justice Ujjal Bhuyan and Justice SV Bhatti
Justice Ujjal Bhuyan and Justice SV Bhatti
Published on: 

ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಎಸ್‌ ವಿ ಭಟ್ಟಿ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯಾಬಲ  32ಕ್ಕೆ  ಏರಿಕೆಯಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ಅವರು ಈ ಇಬ್ಬರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ವಿವಿಧ ನ್ಯಾಯಮೂರ್ತಿಗಳು ಮತ್ತು ವಕೀಲರ ಸಂಘದ ಸದಸ್ಯರು ಭಾಗವಹಿಸಿದ್ದರು.

Also Read
ಈಚೆಗೆ ಇಬ್ಬರು ನ್ಯಾಯಮೂರ್ತಿಗಳ ತ್ವರಿತ ಪದೋನ್ನತಿಯೇ ಕೊಲಿಜಿಯಂ ಸಕ್ರಿಯ ಎಂಬುದಕ್ಕೆ ಸಾಕ್ಷಿ: ಸಿಜೆಐ ಚಂದ್ರಚೂಡ್‌

ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 5 ರಂದು ಅವರನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಪದೋನ್ನತಿಗೊಳಿಸಲು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಜುಲೈ 12ರಂದು ಒಪ್ಪಿಗೆ ಸೂಚಿಸಿತ್ತು.

Kannada Bar & Bench
kannada.barandbench.com