ಕಲಬುರ್ಗಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರು

ಕಲಬುರ್ಗಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರು

ಬಾಡಿ ವಾರೆಂಟ್ ಮೇಲೆ ಮುಂಬೈ ಜೈಲಿನಿಂದ ಹುಬ್ಬಳ್ಳಿಗೆ ಆರೋಪಿಗಳನ್ನು ಕರೆತರಲಾಗಿತ್ತು. ವಿಚಾರಣೆ ಬಳಿಕ ಬೈಕ್ ಮಹಜರಿಗಾಗಿ ಆರೋಪಿಗಳನ್ನು ಠಾಣೆಗೆ ಕರೆದೊಯ್ಯಲಾಯಿತು.
Published on

ಹಿರಿಯ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಬಳಸಿದ್ದೆನ್ನಲಾದ ಬೈಕ್‌ ಕಳ್ಳತನ ಆರೋಪದ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಪೊಲೀಸರು ಬುಧವಾರ ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬಾಡಿ ವಾರೆಂಟ್‌ ಮೇಲೆ ಮುಂಬೈ ಜೈಲಿನಿಂದ ಹುಬ್ಬಳ್ಳಿಗೆ ಆರೋಪಿಗಳನ್ನು ಕರೆತರಲಾಗಿತ್ತು. ವಿಚಾರಣೆ ಬಳಿಕ ಬೈಕ್‌ ಮಹಜರಿಗಾಗಿ ಆರೋಪಿಗಳನ್ನು ಠಾಣೆಗೆ ಕರೆದೊಯ್ಯಲಾಯಿತು.

Also Read
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ

ಹುಬ್ಬಳ್ಳಿ ತಾಲೂಕು ಮಾವನೂರಲ್ಲಿ ಬೈಕ್‌ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಜರು ಬಳಿಕ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂಬೈ ಜೈಲಿಗೆ ಮರಳಿ ಕಳುಹಿಸುವುದಾಗಿ ಪೊಲೀಸರು ತಿಳಿಸಿದರು.

Kannada Bar & Bench
kannada.barandbench.com