ಎಸಿಬಿ ವಿರುದ್ಧ ಟೀಕಾಪ್ರಹಾರ: ವಿಚಾರಣೆ 3 ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಸುಪ್ರೀಂ ಕೋರ್ಟ್‌

ತಮ್ಮ ಮತ್ತು ಎಸಿಬಿ ವಿರುದ್ಧ ನ್ಯಾ ಸಂದೇಶ್ ಅವರು ಮಾಡಿದ ಪ್ರತಿಕೂಲ ಮೌಖಿಕ ಅವಲೋಕನಗಳನ್ನು ಪ್ರಶ್ನಿಸಿ ಎಡಿಜಿಪಿ ಸಿಂಗ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
Supreme Court and Anti-Corruption Bureau ADGP Seemanth Kumar Singh
Supreme Court and Anti-Corruption Bureau ADGP Seemanth Kumar Singh Twitter

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ವಿರುದ್ಧ ಕೆಲ ಟೀಕೆಗಳನ್ನು ಮಾಡಿರುವ ಜಾಮೀನು ಪ್ರಕರಣವೊಂದರ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ [ಸೀಮಂತ್ ಕುಮಾರ್ ಸಿಂಗ್ ಮತ್ತು ಮಹೇಶ್‌ ಪಿ ಎಸ್‌ ನಡುವಣ ಪ್ರಕರಣ].

ತಮ್ಮ ಮತ್ತು ಎಸಿಬಿ ವಿರುದ್ಧ ನ್ಯಾ. ಎಚ್‌ ಪಿ ಸಂದೇಶ್‌ ಅವರು ಜುಲೈ 7ರ ಆದೇಶದಲ್ಲಿ ಮಾಡಿದ್ದ ಪ್ರತಿಕೂಲ ಅವಲೋಕನಗಳನ್ನು ಪ್ರಶ್ನಿಸಿ ಎಡಿಜಿಪಿ ಸಿಂಗ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

Also Read
ನ್ಯಾ. ಸಂದೇಶ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಎಸಿಬಿ

ಹೇಳಿಕೆಗಳನ್ನು ತಪ್ಪಿಸಬಹುದಿತ್ತು ಎಂದು ಎಡಿಜಿಪಿ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೆಲವು ದಿನಗಳ ಕಾಲ ಹೈಕೋರ್ಟ್‌ನ ವಿಚಾರಣೆಗೆ ತಡೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು.

Also Read
ಸಹೋದ್ಯೋಗಿ ನ್ಯಾಯಮೂರ್ತಿ ಬಳಿ ದೆಹಲಿ ವ್ಯಕ್ತಿಯಿಂದ ನನ್ನ ಮಾಹಿತಿ ಸಂಗ್ರಹ: ಆದೇಶದಲ್ಲಿ ದಾಖಲಿಸಿದ ನ್ಯಾ. ಸಂದೇಶ್‌

ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ಕುಮಾರ್, "ನನ್ನ ಕಕ್ಷೀದಾರರ ಎಸಿಆರ್‌ಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದಲಾಗಿದೆ. ಅವರ ವಾದ ಆಲಿಸದೇ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಲಾಗಿದೆ. ಅವರು ಹುದ್ದೆಗೆ ಅರ್ಹರಾಗಿದ್ದಾರೆಯೇ ಎಂದು ಪರಿಗಣಿಸಲು ಸಹ ನಿರ್ದೇಶಿಸಲಾಗಿದೆ" ಎಂದು ಅಲವತ್ತುಕೊಂಡರು.

Also Read
ಬಿ ರಿಫೋರ್ಟ್‌ಗಳ ಮಾಹಿತಿ ಸಮರ್ಪಕವಾಗಿ ನೀಡದ ಎಸಿಬಿ ವಿರುದ್ಧ ಕರ್ನಾಟಕ ಹೈಕೋರ್ಟ್ ಮತ್ತೆ ಗರಂ

ಈ ಹಂತದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರು “ಜಾಮೀನು ಕೋರಿದ್ದ ಅರ್ಜಿದಾರರ ಕಥೆ ಏನಾಯಿತು? ಆರೋಪಿಯನ್ನು ನೀವು ಪಕ್ಷಕಕಾರನ್ನಾಗಿ ಮಾಡಿದ್ದು ಏಕೆ? ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರನ್ನು ಪಕ್ಷಕಾರರನ್ನಾಗಿ ಮಾಡಬೇಕಿತ್ತು” ಎಂದು ತಿಳಿಸಿದರು.

ಅಂತಿಮವಾಗಿ ನ್ಯಾಯಾಲಯ “ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಇಂದಿಗೆ ಪಟ್ಟಿ ಮಾಡಿದ್ದರೂ ಕೂಡ ನ್ಯಾಯಮೂರ್ತಿಗಳು (ನ್ಯಾ ಸಂದೇಶ್‌) ನಾಳೆ ವಿಚಾರಣೆಗೆ ನಿರ್ದೇಶಿಸಿದ್ದು ಕೆಲವು ಮೌಖಿಕ ಆದೇಶಗಳನ್ನು ನೀಡಿದ್ದಾರೆ. ಇದನ್ನು ಪರಿಗಣಿಸಿ 3 ದಿನಗಳ ಕಾಲ ವಿಚಾರಣೆಯನ್ನು ಮುಂದೂಡುವಂತೆ ಕೋರುವುದು ಸೂಕ್ತವೆಂದು ನಾವು ಭಾವಿಸುತ್ತೇವೆ” ಎಂದರು. ಹೀಗಾಗಿ ಪ್ರಕರಣವನ್ನು ಜುಲೈ 14ರ ಗುರುವಾರಕ್ಕೆ ಮುಂದೂಡಲಾಯಿತು.

Related Stories

No stories found.
Kannada Bar & Bench
kannada.barandbench.com