[ಅಂಬೇಡ್ಕರ್‌ ವಿವಾದ] ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ವಿಶೇಷ ಕರ್ತವ್ಯದ ಮೇಲೆ ಬೆಂಗಳೂರಿನ ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
Sri. Mallikarjunagowda

Sri. Mallikarjunagowda

ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ವರ್ಗಾವಣೆ ಮಾಡಿದ್ದು ವಿಶೇಷ ಕರ್ತವ್ಯದ ಮೇಲೆ ಬೆಂಗಳೂರಿನ ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಸೇವೆಗೆ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

ಹಾಲಿ ಮಂಡಳಿಯ ಹುದ್ದೆಯಲ್ಲಿರುವ ನ್ಯಾ. ಎಸ್‌ ಎಚ್‌ ರೇಣುಕಾದೇವಿ ಅವರು ಇದೇ ಫೆ. 28, 2022ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯಬಾಹುಳ್ಯದ ಕಾರಣದಿಂದ ವರ್ಗಾವಣೆ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಅವರು ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ. ಬಿ ಆರ್‌ ಅಂಬೇಡ್ಕರ್‌ ಭಾವಚಿತ್ರ ಇಡುವ ವಿಚಾರದಲ್ಲಿ ವಿವಾದ ಉಂಟಾಗಿತ್ತು. ಈ ವೇಳೆ ರಾಜ್ಯದ ವಿವಿಧೆಡೆ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಪ್ರತಿಭಟನೆಗಳು ನಡೆದಿದ್ದನ್ನು ಇಲ್ಲಿ ನೆನೆಯಬಹುದು.

ಅಧಿಸೂಚನೆಯ ಪ್ರತಿ ಇಲ್ಲಿದೆ:

Also Read
ಅಂಬೇಡ್ಕರ್‌ ಭಾವಚಿತ್ರ ಗೊಂದಲ: ವಕೀಲರು, ಸಂಘಟನೆಗಳಿಂದ ಮನವಿ ಸಲ್ಲಿಕೆ; ವರದಿ ಕೇಳಿದ ಹೈಕೋರ್ಟ್
Kannada Bar & Bench
kannada.barandbench.com